NEWSನಮ್ಮರಾಜ್ಯ

SEP 13- ರಾಜ್ಯದಲ್ಲಿ 9,894 ಮಂದಿಗೆ ಸೋಂಕು ದೃಢ, 104 ಜನರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಅಟ್ಟಹಾಸ ಮುಂದುವರಿಸಿದ್ದು, ಇಂದು 9,894 ಮಂದಿ ಕೊರೊನಾಗೆ ಸೇರ್ಪಡೆಯಾಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆ 4,59,445ಕ್ಕೇರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಇಂದು 104 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7,284ಕ್ಕೆ (ಅನ್ಯಕಾರಣಕ್ಕೆ 19 ಮೃತರು ಸೇರಿ) ಏರಿಕೆಯಾಗಿದೆ.

ಕೊರೊನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 45 ಸೋಂಕಿತರು ಸೇರಿ ರಾಜ್ಯದಲ್ಲಿ ಒಟ್ಟು 104 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಅಂದರೆ 3,479 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,70,662ಕ್ಕೆ ಏರಿಕೆಯಾಗಿದೆ.

ಇಂದು 8,402 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,52,958ಕ್ಕೆ ಏರಿಕೆಯಾಗಿದೆ. 99,203 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 807 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್