Vijayapatha – ವಿಜಯಪಥ
Friday, November 1, 2024
CrimeNEWSನಮ್ಮರಾಜ್ಯ

ಚಿತ್ರದುರ್ಗ: 10 ದಿನಗಳ ಹಿಂದಷ್ಟೇ ಮದ್ವೆಯಾಗಿದ್ದ ಕ್ಯಾಮರಾಮನ್ ಕೊರೊನಾಗೆ ಬಲಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಕಳೆದ ಹತ್ತು ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ ಖಾಸಗಿ ವಾಹಿನಿಯ ಚಿತ್ರದುರ್ಗ ಜಿಲ್ಲೆ ಕ್ಯಾಮೆರಾಮನ್ ವಿನಾಯಕ ಕೊರೊನಾದಿಂದ ತೀವ್ರ ಉಸಿರಾಟದ ತೊಂದರೆಯಾಗಿ ಮೃತಪಟ್ಟಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ರಾತ್ರಿ ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಸಿಟಿ ಸೆಂಟ್ರಲ್ ಹಾಸ್ಪಿಟಲ್ ಗೆ ದಾಖಲಿಸಲಾಗಿತ್ತು. ಎಲ್ಲಾ ಪರೀಕ್ಷೆಗಳ ಬಳಿಕ ಕೋವಿಡ್ ದೃಢವಾಗಿದೆ.

ಇತ್ತೀಚೆಗೆ ಹೊಸ ಮನೆ ಕಟ್ಟಿ, ನವ ಜೀವನಕ್ಕೆ ಕಾಲಿಟ್ಟಿದ್ದರು. ದಾಂಪತ್ಯ ಜೀವನದ ಕನಸು ಹೊತ್ತು ಬಾಳಸಂಗಾತಿಯಾಗಿ ಕೈಹಿಡಿದಿದ್ದ ಆ ಹೆಣ್ಣು ಮಗುವಿಗೆ ದೇವರೇ ದಿಕ್ಕು ಎಂಬಂತಾಗಿದೆ. ಇನ್ನು ಮನೆಯಲ್ಲಿ ವಯಸ್ಸಾದ ತಂದೆ-ತಾಯಿ ಇದ್ದಾರೆ. ವಿಧಿಯಾಟದ ಮುಂದೆ ನಮ್ಮದೇನು ಇಲ್ಲ ಎನ್ನುವಂತೆ ವಿನಾಯಕ ಇಹಲೋಕ ತ್ಯಜಿಸಿ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿಯೇ ಬಿಟ್ಟಿದ್ದಾರೆ.

ಚಿತ್ರದುರ್ಗ ತಾಲೂಕಿನ ಅನ್ನೇಹಾಳ್ ಗ್ರಾಮದ ವರಾದ ವಿನಾಯಕ ಚಿತ್ರದುರ್ಗದ ದವಳಗಿರಿ ಬಡಾವಣೆಯಲ್ಲಿ ವಾಸವಾಗಿದ್ದರು. ಚಿತ್ರದುರ್ಗ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ರು. ಪ್ರಸ್ತುತ ಖಾಸಗಿ ವಾಹಿನಿಯೊಂದರಲ್ಲಿ ಕ್ಯಾಮರಾಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಚಿತ್ರದುರ್ಗ ಸಿಟಿ ಕೇಬಲ್, ಕ್ಯಾಮರಾ ಮೆನ್ ಆಗಿ ಕಾರ್ಯ ನಿರ್ವಹಿಸಿದ್ದರು. ಮನೆ ಮುಂದೆ ಮದುವೆಗಾಗಿ ಹಾಕಲಾಗಿದ್ದ ಚಪ್ಪರ ಬಿಚ್ಚುವ ಮುನ್ನವೇ ಇಂದು ಬೆಳಗ್ಗಿನ ಜಾವ ವಿನಾಯಕ ಇಹಲೋಕ ತ್ಯಜಿಸಿದ್ದಾರೆ.

Leave a Reply

error: Content is protected !!
LATEST
ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು