NEWSದೇಶ-ವಿದೇಶನಮ್ಮರಾಜ್ಯ

ಕೇಂದ್ರದ ತಾರತಮ್ಯ- ಕರ್ನಾಟಕದ ಜನರು 25 ಸಂಸದರ ಕೊಟ್ಟಿದೆ ತಪ್ಪಾಯಿತಾ ಮೋದಿ ಸರ್‌?: ಸಂಸದ ಪ್ರಜ್ವಲ್ ರೇವಣ್ಣ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಹಾಸನ: ಕೊರೊನಾ ಮಹಾಮಾರಿ ರಾಜ್ಯವನ್ನು ಇನ್ನಿದಂತೆ ಬಾಧಿಸುತ್ತಿದ್ದು, ಚಿಕಿತ್ಸೆ ಬೆಡ್‌ ಸಿಗದೆ ಜನರು ಮನೆಯಲ್ಲೇ ಮೃತಪಡುತ್ತಿದ್ದಾರೆ. ಆದರೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇದಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ ಎಂಬಂತೆ ವರ್ತಿಸುತ್ತಿವೆ ಎಂದು ಜೆಡಿಎಸ್‌ನ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕೊರೊನಾ ನಿರ್ವಹಣೆಯ ವಿಚಾರದಲ್ಲಿ ದೆಹಲಿಯಲ್ಲಿ ಹತ್ತು ಸಾವಿರ ಬೆಡ್ ನಿರ್ಮಾಣ ಮಾಡಿದ್ದೇವೆ ಎನ್ನುವ ಪ್ರಧಾನಿ ಮೋದಿಯ ಹೇಳಿಕೆ ಬರೀ ಸುಳ್ಳು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಬಜೆಟ್ ನಲ್ಲಿ 35 ಸಾವಿರ ಕೋಟಿ ರೂ.ಗಳನ್ನು ಲಸಿಕೆಗಾಗಿ ಮೀಸಲಿಡಲಾಗಿದೆ ಎನ್ನುವ ಮಾತನ್ನು ಮೋದಿಯವರು ಹೇಳಿದ್ದರು. ಬಜೆಟ್ ಅಪ್ರೂವಲ್ ಕೂಡಾ ಆಗುತ್ತೆ. ಆ ದುಡ್ಡು ಎಲ್ಲಿಗೆ ಹೋಯಿತು ಎಂದು ಪ್ರಜ್ವಲ್ ಪ್ರಶ್ನಿಸಿದ್ದಾರೆ.

ರಾಜ್ಯಕ್ಕೆ ಲಸಿಕೆ ನೀಡಲು ನಾಲ್ಕು ನೂರು ರೂಪಾಯಿ ನಿಗದಿ ಮಾಡಿದ್ದಾರೆ. ಈ ಕಡೆ ರಾಜ್ಯಕ್ಕೆ ಕುಡಬೇಕಿರುವ ಜಿಎಸ್ಟಿ ದುಡ್ಡು ಕೊಡುವುದಿಲ್ಲ, ಲಸಿಕೆ ಹೆಚ್ಚು ಕೊಡುವುದಿಲ್ಲ. ಆಕ್ಸಿಜನ್ ಹೆಚ್ಚುವರಿ ಕೇಳಿದರೆ ನಮ್ಮ ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ಕೇಸ್ ಹಾಕುತ್ತಾರೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

ಯಾಕೆ ಮೋದಿ ಸರ್, ಕರ್ನಾಟಕದ ಜನತೆ ಏನು ತಪ್ಪು ಮಾಡಿದ್ದಾರೆ. ನಿಮಗೆ 25 ಸಂಸದರನ್ನು ಕೊಟ್ಟಿದ್ದು ತಪ್ಪಾ? ಸ್ವರ್ಗಾನೇ ಇಳಿಸುತ್ತಾರೆಂದು ಮಾತನಾಡುತ್ತಿದ್ದ ರಾಜ್ಯ ಬಿಜೆಪಿ ನಾಯಕರು ಈಗ ಏನು ಹೇಳುತ್ತಾರೆ ಎಂದು ಪ್ರಜ್ವಲ್ ಪ್ರಶ್ನಿಸಿದ್ದಾರೆ.

ಇಡೀ ದೇಶದಲ್ಲಿ ಅತಿಹೆಚ್ಚು ಸೋಂಕಿತರು ವರದಿಯಾಗುತ್ತಿರುವುದು ನಮ್ಮ ಕರ್ನಾಟಕದಲ್ಲಿ. ಸ್ಮಶಾನದಲ್ಲಿ ಕಿಲೋಮೀಟರ್ ಗಟ್ಟಲೆ ಕ್ಯೂ ಇದೆ. ಇನ್ನು ಮುಂದೆಯಾದರೂ ಎಚ್ಚೆತ್ತುಕೊಂಡು ರಾಜ್ಯದ ಜನತೆಯನ್ನು ಉಳಿಸಿಕೊಳ್ಳುವ ಕೆಲಸವನ್ನು ಮಾಡಿ ಎಂದು ಮನವಿ ಮಾಡಿದ್ದಾರೆ.

ಎಷ್ಟೋ ಜನ ಬೆಡ್ ಸಿಗದೇ ಮನೆಯಲ್ಲೇ ಸಾವನ್ನಪ್ಪುತ್ತಿದ್ದಾರೆ. ಜನರ ಆಕ್ರೋಶ ಹೊರಬರುವ ಮುನ್ನ ಸೂಕ್ತ ಕ್ರಮ ತೆಗೆದುಕೊಳ್ಳಿ ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...