ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಲವು ಸೋಂಕಿತರು ಸಾವನ್ನಪ್ಪಿರುವ ದುರ್ಘಟನೆ ತೀವ್ರ ಆಘಾತವನ್ನುಂಟು ಮಾಡಿದೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಿಎ,ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಶೀಘ್ರದಲ್ಲಿ ವರದಿ ಸಲ್ಲಿಸಲು ಹಿರಿಯ ಅಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. ಇಂಥಾ ಘಟನೆಗಳು ಮತ್ತೆ ಮರುಕಳಿಸದಂತೆ ಸರ್ಕಾರ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.