NEWSರಾಜಕೀಯ

ರಾಜ್ಯ ಲಾಕ್‌ಡೌನ್‌ ಮುನ್ಸೂಚನೆ ನೀಡಿದ ಸಿಎಂ ಬಿಎಸ್‌ವೈ: ಸಚಿವರು ಅಧಿಕಾರಿಗಳ ಸಭೆ ಆರಂಭ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಮಹಾಮಾರಿ ರಾಜ್ಯವನ್ನು ಹೆಚ್ಚು ಹೆಚ್ಚಾಗಿ ಬಾಧಿಸುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಮಾಡುವ ಕುರಿತು ಇಂದು ಸಿಎಂ ಯಡಿಯೂರಪ್ಪ ಹಿರಿಯ ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಈ ಸಂಬಂಧ ಸಭೆ ನಡೆಯುತ್ತಿದ್ದು, ಸಚಿವರಾದ ಆರ್‌.ಅಶೋಕ್‌, ಡಿಸಿಎಂ ಅಶ್ವತ್ಥನಾರಾಯಣ, ಅಧಿಕಾರಿಗಳಾದ ಮಂಜುನಾಥ್‌ ಪ್ರಸಾದ್‌, ಕಮಲ್‌ಪಂಥ್‌ ಸೇರಿ ಇತರರು ಭಾಗಿಯಾಗಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ ಇರುವ ಜನತಾ ಕರ್ಫ್ಯೂನಿಂದ ಏನು ಪ್ರಯೋಜವಾಗುತ್ತಿಲ್ಲ. ಹೀಗಾಗಿ ನಾವು ಕಠಿಣ ನಿಲುವನ್ನು ತೆಗೆದುಕೊಳ್ಳುವುದು ಅನಿರ್ವಾಯವಾಗಿದೆ ಎಂದು ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದ ಬೆನ್ನಲ್ಲೇ ಸಭೆ ಆರಂಭವಾಗಿದೆ. ಈ ಸಭೆಯಲ್ಲಿ ಇಂದಿನಿಂದಲೇ ಇಲ್ಲ ನಾಳೆಯಿಂದಲೇ ಲಾಕ್‌ಡೌನ್‌ ಜಾರಿ ಮಾಡುವ ಸಂಬಂಧ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕಳೆದ ಏಪ್ರಿಲ್‌ 28ರಿಂದ ಜನತಾ ಕರ್ಫ್ಯೂ ಜಾರಿಯಾಗಿದ್ದು, ಇಂದಿಗೆ 10 ದಿನ ಕಳೆದರೂ ಯಾವುದೇ ಪ್ರಯೋಜನವಾಗಿಲ್ಲ. ಜನರ ಓಡಾಟ ಸಾಮಾನ್ಯವಾಗಿದೆ. ಜತೆಗೆ ಕೊರೊನಾ ಸೋಂಕಿತರ ಸಂಖ್ಯೆಯೂ ಗಣನೀಯವಾಗಿ ಏರುತ್ತಲೇ ಇದೆ. ಇದು ಹೀಗೆ ಮುಂದುವರಿದರೆ ನಾಡಿನಲ್ಲಿ ಇನ್ನು ಹೆಚ್ಚಿನ ಅನಾಹುತ ಮಾಡಲಿದೆ. ಹೀಗಾಗಿ ಲಾಕ್‌ಡೌನ್‌ ಅನಿವಾರ್ಯ ಎಂದು ಆಡಳಿತ ಪಕ್ಷದ ಶಾಸಕರು, ಸಂಸದರೇ ಹೇಳಿಕೆ ನೀಡುತ್ತಿದ್ದಾರೆ.

ಈ ಎಲ್ಲವನ್ನು ಗಮನಿಸಿರುವ ಸಿಎಂ ಯಡಿಯೂರಪ್ಪ ಲಾಕ್‌ಡೌನ್‌ ಮಾಡುವ ಮುನ್ಸೂಚನೆ ನೀಡಿದ್ದು, ಅಧಿಕಾರಿಗಳು ಸಚಿವರನ್ನು ಕರೆದು ಚರ್ಚೆ ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ಲಾಕ್‌ಡೌನ್‌ ಮಾಡಿದರೆ ಸಾಮಾನ್ಯರ ಜೀವನದ ಗತಿ ಏನು? ಅವರಿಗೆ ಆಹಾರ ಒದಗಿಸುವುದು ಹೇಗೆ? ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕೊಡಿಸುವುದು ಹೇಗೆ? ಇತ್ಯಾದಿಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ