NEWSನಮ್ಮರಾಜ್ಯ

ಪೊಲೀಸರ ಕೈಗೆ ಲಾಠಿ ಕೊಟ್ಟರೆ ಜನರನ್ನು ಕಾಪಾಡಿದಂತಾಗದು : ರಾಜ್ಯ ಕಾಂಗ್ರೆಸ್‌ ಕಿಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬೋನಿನೊಳಗೆ ಕೂಡಿಟ್ಟ ಪ್ರಾಣಿಗಳಿಗೇ ಆಹಾರ ಒದಗಿಸಲಾಗುತ್ತದೆ. ಆದರೆ ಈ ಸರ್ಕಾರ “ಜನತೆ ಬೋನಿನೊಳಗೆ ಇರಬೇಕು. ಆದರೆ ಆಹಾರ ಮಾತ್ರ ನೀಡಲಾರೆವು ಎನ್ನುತ್ತಿದೆ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರದ ವ್ಯವಸ್ಥೆ ಬಗ್ಗೆ ಕಿಡಿಕಾರಿದೆ.

ಯಾವುದೇ ನೆರವನ್ನೂ ನೀಡದ ಸರ್ಕಾರ ಜನತೆಯನ್ನು ಕೂಡಿಹಾಕಿ ಪೊಲೀಸರ ಕೈಗೆ ಲಾಠಿ ಕೊಟ್ಟರೆ ಜನರನ್ನು ಕಾಪಾಡಿದಂತಾಗದು ಎಂದು ಸರಣಿ ಟ್ವೀಟ್‌ ಮೂಲಕ ಅಸಮಾಧಾನ ಹೊರಹಾಕಿದೆ.

ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಕ್ಕಿಂತಲೂ ಜನತೆ ಹೆಚ್ಚು ಜವಾಬ್ದಾರಿಯುತವಾಗಿದ್ದಾರೆ, ಸರ್ಕಾರಕ್ಕಿಂತಲೂ ಮುಂಜಾಗ್ರತೆಯ ಜಾಗೃತಿ ಜನತೆಗಿದೆ ಎಂದು ಹೇಳಿದೆ.

ಜನರು ಬದುಕಿನ ಅನಿವಾರ್ಯತೆಗೆ ಹೊರತು, ಆಟವಾಡಲು ರಸ್ತೆಗೆ ಬರುತ್ತಿಲ್ಲ. ಸರ್ಕಾರ ಪೊಲೀಸ್ ದೌರ್ಜನ್ಯ ನಿಲ್ಲಿಸಿ, ರೇಷನ್ ಕಿಟ್‌ಗಳನ್ನು ಮನೆ ಬಾಗಿಲಿಗೆ ಒದಗಿಸಲಿ. ಅಗತ್ಯ ನೆರವು ಘೋಷಿಸಲಿ ಎಂದು ಆಗ್ರಹಿಸಿದೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ