ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ರಣಕೇಕೆ ಮುಂದುವರಿದಿದ್ದು, ಅರ್ಧ ಲಕ್ಷ ಬಾರಿಸುವ ಮೂಲಕ ರಾಜ್ಯವನ್ನು ಅದೋಗತಿಗೆ ದೂಡುತ್ತಿದೆ. ಈ ಮೂಲಕ ಮರಣ ಮೃದಂಗವನ್ನು ಬಾರಿಸಿದ್ದು, ಹಿಂದಿನ ಎಲ್ಲಾ ದಾಖಲೆಗಳನ್ನು ಉಡೀಸ್ ಮಾಡಿ ಮಹಾಮಾರಿಗೆ ಬುಧವಾರ ಒಂದೇ ದಿನ ಬರೋಬ್ಬರಿ 346 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 16,884ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 50,112 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 17,41,046ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 23,106 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 8,63,380ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 161 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 26,841 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 12,36,854ಕ್ಕೆ ಏರಿಕೆಯಾಗಿದೆ. ಇನ್ನು 4,87,288 ಸಕ್ರಿಯ ಪ್ರಕರಣಗಳಿವೆ.
ಇಂದಿನ 05/05/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿhttps://t.co/6WbeufojfC @CMofKarnataka @BSYBJP @mla_sudhakar @drashwathcn @RAshokaBJP @BSBommai @CPBlr @PIBBengaluru @KarnatakaVarthe @PIBBengaluru @BBMPCOMM @BlrCityPolice @blrcitytraffic pic.twitter.com/JitgSUQ51p
— K'taka Health Dept (@DHFWKA) May 5, 2021