NEWSನಮ್ಮರಾಜ್ಯ

ಹಳ್ಳಿಗಳಲ್ಲೂ ಕೊರೊನಾ ಆರ್ಭಟ: ಸೋಂಕಿತರು ಡೈರಿಗೆ ಹಾಲು ತಂದು ಹಾಕುವುದು ಸರಿಯಲ್ಲ-ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೋವಿಡ್ 19 ಈಗ ಹಳ್ಳಿ ಹಳ್ಳಿಗಳನ್ನು ವೇಗವಾಗಿ ವ್ಯಾಪಿಸುತ್ತಿದೆ. ಸೋಂಕಿತರು ಹಾಲನ್ನು ಡೈರಿಗಳಿಗೆ ತಂದು ಹಾಕುತ್ತಿರುವುದರಿಂದ ರೋಗ ಇನ್ನಷ್ಟು ಹಬ್ಬುತ್ತಿದೆ. ಗ್ರಾಮೀಣ ಭಾಗದ ಈ ಹೊಸ ಸಮಸ್ಯೆಯನ್ನು ಸರಕಾರ, ಕೆಎಂಎಫ್ ಮತ್ತು ಹಾಲು ಒಕ್ಕೂಟಗಳು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದೆ ದೊಡ್ಡ ಅನಾಹುತಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈಗಲೇ ಜಾಗೃತಿ ಮೂಡಿಸದಿದ್ದರೆ ಹಳ್ಳಿಗಳಲ್ಲಿ ಸಾವುನೋವಿನ ಪ್ರಮಾಣ ಹೆಚ್ಚಾಗುವುದರಲ್ಲಿ ಅನುಮಾನವಿಲ್ಲ. ಕೋವಿಡ್ ಸೋಂಕಿತರ ಮನೆಯ ರಾಸುಗಳಿಂದ ಕರೆದ ಹಾಲನ್ನು ಸೋಂಕಿತರೇ ನೇರವಾಗಿ ಡೈರಿಗೆ ತಂದು ಹಾಲು ಹಾಕುವುದು ಬೇಡ. ಸೋಂಕಿತರಲ್ಲದ ಮನೆಯ ಆರೋಗ್ಯವಂತ ಸದಸ್ಯರು ಹಾಲನ್ನು ತಂದುಹಾಕುವುದರಿಂದ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಬಹುದು ಎಂದು ಸಲಹೆ ನೀಡಿದ್ದಾರೆ.

ಡೈರಿಗೆ ಹಾಲು ಹಾಕಲು ಬಂದವರು ಕಡ್ಡಾಯವಾಗಿ ಶುಚಿತ್ವ, ಮಾಸ್ಕ್, ಸ್ಯಾನಿಟೈಸರ್ ಬಳಸುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಕಡ್ಡಾಯವಾಗಿ ಡೈರಿಗಳಲ್ಲಿ ಶುಚಿತ್ವ ಕಾಪಾಡುವುದರ ಜೊತೆಗೆ ಪರಸ್ಪರ ಅಂತರವನ್ನು ಕಾಯ್ದುಕೊಳ್ಳಬೇಕು ಎಂದಿದ್ದಾರೆ.

ಹಾಲು ಉತ್ಪಾದಕ ಸಂಘಗಳಲ್ಲಿ ಕಾರ್ಯ ನಿರ್ವಹಿಸುವ ನೌಕರರನ್ನು ಕೋವಿಡ್ ವಾರಿಯರ್ಸ್ ಎಂದು ಘೋಷಿಸಬೇಕು. ಪಶುವೈದ್ಯರು, ಅಂಗನವಾಡಿ ಕಾರ್ಯಕರ್ತೆಯರು ಗ್ರಾಮೀಣ ಭಾಗದಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ