NEWSರಾಜಕೀಯ

ಏ.1ರಿಂದ ಎಲ್ಲರಿಗೂ ಕೋವಿಡ್‌ ಲಸಿಕೆ: ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ದಿನದಿಂದ ದಿನಕ್ಕೆ ಮತ್ತೆ ಕೊರೊನಾ ಸೋಂಕು ದೇಶದಲ್ಲಿ ತನ್ನ ಆರ್ಭಟವನ್ನು ಮುಂದುವರಿಸಿದ್ದು, ಇದರಿಂದ ಮತ್ತೆ ದೇಶ ಸಂಕಷ್ಟಕ್ಕೆ ಸಿಲುಕುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಹೀಗಾಗಿ ಮುಂಜಾಗ್ರತೆ ಕ್ರಮವಾಗಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಏಪ್ರಿಲ್‌ 1ರಿಂದ ಕೋವಿಡ್‌ ಲಸಿಕೆ ನೀಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ವಾಸಿಗಳು ಅದರಲ್ಲೂ 45 ವರ್ಷ ಮೇಲ್ಪಟ್ಟ ಅರ್ಹರು ಶೀಘ್ರವೇ ಹೆಸರನ್ನು ನೋಂದಾಯಿಸಿಕೊಂಡು ಲಸಿಕೆ ಪಡೆದುಕೊಳ್ಳಿ ಎಂದು ಕರೆ ನೀಡಿದರು.

ದೇಶದ ಹಾಗೂ ವಿಶ್ವದ ವಿಜ್ಞಾನಿಗಳ ಸಲಹೆಯಂತೆ, ಕೋವಿಶೀಲ್ಡ್‌ ಲಸಿಕೆಯ ಎರಡನೇ ಡೋಸ್‌ ಅನ್ನು 4ನೇ ಮತ್ತು 8ನೇ ವಾರದ ಮಧ್ಯೆ ತೆಗೆದುಕೊಳ್ಳಬೇಕು. ಕೊರೊನಾ ವಿರುದ್ಧ ಹೋರಾಡಲು ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು. ಇದರಿಂದ ದೇಶವನ್ನು ಕೊರೊನಾ ಮುಕ್ತವಾಗಿಸಲು ಸಾಧ್ಯ ಎಂದು ಹೇಳಿದರು.

ವಯೋಮಿತಿ ನಿಯಮ ತೆಗೆಯಿರಿ
ಇನ್ನು ಲಸಿಕೆ ನೀಡಿಕೆಗೆ ವಯೋಮಿತಿ ನಿಯಮ ತೆಗೆಯಿರಿ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೂಟ್, ಪಂಜಾಬ್ ಕ್ಯಾಪ್ಟನ್ ಅಮರೀಂದರ್ ಸಿಂಗ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ದೇಶದಲ್ಲಿ ಮಾರಕ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಪ್ರತೀಯೊಬ್ಬರಿಗೂ ಲಸಿಕೆ ನೀಡಬೇಕು. ಕೋವಿಡ್ 19 ಲಸಿಕೆಗಳನ್ನು ಎಲ್ಲಾ ವಯಸ್ಸಿನವರಿಗೆ ಲಭ್ಯವಾಗುವ ಹಾಗೆ ಮಾಡುವುದರಿಂದ ಕೋವಿಡ್ ನ ರೂಪಾಂತರಿ ಅಲೆ ಅಥವಾ ಎರಡನೇ ಅಲೆಯನ್ನು ನಿಯಂತ್ರಣ ಮಾಡಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಪಂಜಾಬ್ ನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಜಸ್ಥಾನ ಸಿಎಂ ಗೆಹ್ಲೂಟ್, ಭಾರತದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ, ವ್ಯಾಕ್ಸಿನೇಷನ್ ಬಗ್ಗೆ ಸರ್ಕಾರ ಗಮನ ಹರಿಸಬೇಕು. ಕೋವಿಡ್-19 ವಿರುದ್ಧ ಗರಿಷ್ಠ ವ್ಯಾಕ್ಸಿನೇಷನ್ ನೀಡುವ ಮೂಲಕ ಸಾರ್ವಜನಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಕೋವಿಡ್ 19 ರೂಪಾಂತರಿ ವೈರಸ್ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚು ಆತಂಕಕಾರಿಯಾಗಿ ಕಾಣಿಸುತ್ತಿದೆ. ವ್ಯಾಕ್ಸಿನೇಶನ್ ನನ್ನು ಕೇಂದ್ರ ಸರ್ಕಾರ ಜಾಸ್ತಿ ಮಾಡಬೇಕಿದೆ. ಕೋವಿಡ್ 19 ರೂಪಾಂತರಿ ವೈರಸ್ ನಿಂದ ಜನರನ್ನು ರಕ್ಷಣೆ ಮಾಡಬೇಕಿದೆ. ಆದ್ದರಿಂದ ವ್ಯಾಕ್ಸಿನೇನ್‌ಗೆ ವಯೋ ಮಿತಿಯನ್ನು ತೆಗೆದು ಹಾಕಬೇಕು ಎಂದು ಹೇಳಿದ್ದಾರೆ.

ಇನ್ನು ಮಂಗಳವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಕೊರೊನಾ  ಲಸಿಕೆ ಪಡೆದರು.  ಈ ವೇಳೆ ಜಯದೇವ ಆಸ್ಪತ್ರೆಯ ಡಾ. ಸಿ.ಮಂಜುನಾಥ್‌  ಮತ್ತು ಆಸ್ಪತ್ರೆಯ ವೈದ್ಯರು ಇದ್ದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್...