Breaking NewsNEWSದೇಶ-ವಿದೇಶ

ಕೋವಿಡ್ ಲಸಿಕೆಗಳು ಬಂಜೆತನಕ್ಕೆ ಕಾರಣವಾಗಲ್ಲ: ಕೇಂದ್ರದಿಂದ ಸ್ಪಷ್ಟನೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೋವಿಡ್ ಲಸಿಕೆಗಳು ಬಂಜೆತನಕ್ಕೆ ಕಾರಣವಾಗುವುದಿಲ್ಲ ಮತ್ತು ವಯಸ್ಕರಲ್ಲಿ ಸಂತಾನೋತ್ಪತ್ತಿ ಫಲವತ್ತತೆಯ ಮೇಲೆ ಲಸಿಕೆಗಳು ಋಣಾತ್ಮಕ ಪರಿಣಾಮ ಬೀರುತ್ತದೆ ಎನ್ನುವುದು ತಪ್ಪು ಕಲ್ಪನೆ ಎಂದು ಕೇಂದ್ರ ಸೋಮವಾರ ಸ್ಪಷ್ಟಪಡಿಸಿದೆ.

ಕೊರೊನಾ ಲಸಿಕಾ ಅಭಿಯಾನ ಸಂದರ್ಭದಲ್ಲಿ ಸಮುದಾಯದಲ್ಲಿ ಇಂತಹ ತಪ್ಪು ಸಂದೇಶ ಮತ್ತು ವದಂತಿಗಳು ಹರಡುತ್ತಿರುವುದನ್ನು ಗಮನಿಸಲಾಗಿದೆ. ಈ ಹಿಂದೆ ಪೋಲಿಯೋ ಮತ್ತು ದಡಾರ-ರುಬೆಲ್ಲಾ ಲಸಿಕೆ ಅಭಿಯಾನದ ವೇಳೆ ಸಹ ಇಂತಹ ವದಂತಿಗಳು ಹರಡಿತ್ತು.

ಇಂತಹ ಮೂಢನಂಬಿಕೆಗಳು ಹಾಗೂ ಕಾಲ್ಪನಿಕ ಕಥೆಗಳು ಆರೋಗ್ಯ ಕಾರ್ಯಕರ್ತರು ಮತ್ತು ದಾದಿಯರು ಸೇರಿದಂತೆ ಮುಂಚೂಣಿ ಕಾರ್ಯಕರ್ತರಿಂದ ಕೇಳಿಬಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದ್ದು, ಇದು ಒಂದುರೀತಿ ಆತಂಕವನ್ನು ಉಂಟುಮಾಡಿತು. ಕಾರಣ ಲಸಿಕೆ ಬಗ್ಗೆ ಅರಿವು ಮೂಡಿಸುವವರಿಂದಲೇ ಇಂಥ ಹೇಳಿಕೆಯೇ ಎಂದು. ಆದರೆ ಅದಲ್ಲ ಸುಳ್ಳು ಎಂಬುವುದು ಈಗ ಎಲ್ಲರಿಗೂ ಅರಿವಾಗಿ ಎಂದು ವಿವರಿಸಿದೆ.

ಲಭ್ಯವಿರುವ ಯಾವುದೇ ಲಸಿಕೆಗಳು ಫಲವತ್ತತೆ ಮೇಲೆ ಪರಿಣಾಮ ಬೀರುವುದಿಲ್ಲ ಏಕೆಂದರೆ ಎಲ್ಲಾ ಲಸಿಕೆಗಳು ಮತ್ತು ಅವುಗಳ ಡೋಸ್ ಗಳನ್ನು ಮೊದಲು ಪ್ರಾಣಿಗಳ ಮೇಲೆ ಪ್ರಯೋಗಿಸಲಾಗಿದೆ. ಅಲ್ಲದೆ ನಂತರ ಮಾನವರಲ್ಲಿ ಅಂತಹ ಯಾವುದೇ ಅಡ್ಡಪರಿಣಾಮಗಳಿವೆಯೇ ಎನ್ನುವುದನ್ನು ಪರೀಕ್ಷಿಸಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ. ಲಸಿಕೆಗಳು ಅವುಗಳ ಸುರಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಖಚಿತಪಡಿಸಿದ ನಂತರವೇ ಬಳಕೆಗೆ ಅನುಮತಿ ನೀಡಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ.

ಕೊರೊನಾಗಾಗಿ ಲಸಿಕೆ ಆಡಳಿತದ ರಾಷ್ಟ್ರೀಯ ತಜ್ಞರ ಗುಂಪು ಎಲ್ಲಾ ಹಾಲುಣಿಸುವ ಮಹಿಳೆಯರಿಗೆ ಲಸಿಕೆ ನೀಡಲು ಶಿಫಾರಸು ಮಾಡಿದೆ, ಲಸಿಕೆಗೆ ಮೊದಲು ಅಥವಾ ನಂತರ ಸ್ತನ್ಯಪಾನವನ್ನು ನಿಲ್ಲಿಸುವ ಅಥವಾ ವಿರಾಮ ನೀಡುವ ಅಗತ್ಯವಿಲ್ಲ ಎಂದು ಹೇಳಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು