NEWSಉದ್ಯೋಗ

ಮೇ 10 ರಂದು ಗುತ್ತಿಗೆ ವೈದ್ಯರು, ಶುಶ್ರೂಷಕರ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕಲಬುರಗಿ: ಕೋವಿಡ್-19 ಸಾಂಕ್ರಾಮಿಕ ರೋಗದ ನಿರ್ವಹಣೆಗಾಗಿ ಜಿಲ್ಲೆಯ ತಾಲೂಕಾ ಆಸ್ಪತ್ರೆಗಳಲ್ಲಿ ರಚಿಸಲಾದ ಐ.ಸಿ.ಯು.ಗಳು ಮತ್ತು ಆಮ್ಲಜನಕ ಬೆಂಬಲಿತ ಹಾಸಿಗೆಗಳನ್ನು ನಿರ್ವಹಿಸಲು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಆರು ತಿಂಗಳ ಅವಧಿಗೆ ವೈದ್ಯರು, ಶುಶ್ರೂಷಕರು ಹಾಗೂ ಗ್ರೂಪ್ “ಡಿ” ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ 2021ರ ಮೇ 10 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ (ವಾಕ್-ಇನ್-ಇಂಟರ್‌ವ್ಯೂವ್) ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿಗಳ ಅನುಮೋದನೆಯನ್ವಯ ಜಿಲ್ಲೆಯ ತಾಲೂಕಾ ಮಟ್ಟದ ಆಸ್ಪತ್ರೆಗಳಾದ ಅಫಜಲಪುರ, ಆಳಂದ, ಚಿಂಚೋಳಿ, ಚಿತ್ತಾಪೂರ, ಜೇವರ್ಗಿ ಹಾಗೂ ಸೇಡಂಗಳಲ್ಲಿ ರಚಿಸಲಾದ ಐ.ಸಿ.ಯು. ಹಾಗೂ ಆಮ್ಲಜನಕ ಬೆಂಬಲಿತ ಹಾಸಿಗೆಗಳ ವಿಭಾಗದಲ್ಲಿ ಕಾರ್ಯನಿರ್ವಹಿಸಲು ಈ ಕೆಳಕಂಡ ಹುದ್ದೆಗಳನ್ನು ಮೇರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನ ಏರ್ಪಡಿಸಲಾಗಿದೆ.

18 ಜನ ವೈದ್ಯರು ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ., ಎಂ.ಬಿ.ಬಿ.ಎಸ್. ಅಂಕಪಟ್ಟಿ, ಇಂಟರ್‌ಶಿಪ್ ಮತ್ತು ಕೆ.ಎಮ್.ಸಿ. ರೇಜಿಸ್ಟೆçÃಷನ್ ಪ್ರ.ಪತ್ರದ ಶೈಕ್ಷಣಿಕ ದಾಖಲೆಗಳನ್ನು ಹೊಂದಿರಬೇಕು. ಪ್ರತಿ ಮಾಹೆ 60,000 ರೂ.ಗಳ ವೇತನ ನೀಡಲಾಗುತ್ತದೆ. ವಯೋಮಿತಿ 47 ವರ್ಷದೊಳಗಿರಬೇಕು.

18 ಜನ ಶುಶ್ರೂಷಕರು ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ., ಡಿಪ್ಲೋಮಾ/ಬಿ.ಎಸ್ಸಿ ನರ್ಸಿಂಗ್ ಅಂಕಪಟ್ಟಿ, ಶುಶ್ರೂಷಕ ನೋಂದಣಿ ಪ್ರ.ಪತ್ರದ ಶೈಕ್ಷಣಿಕ ದಾಖಲಾತಿಗಳು ಹೊಂದಿರಬೇಕು. ಮಾಸಿಕ 25,000 ರೂ.ಗಳ ವೇತನ ನೀಡಲಾಗುತ್ತದೆ. ವಯೋಮಿತಿ 40 ವರ್ಷದೊಳಗಿರಬೇಕು.

18 ಜನ ಗ್ರೂಪ್ “ಡಿ” ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಶೈಕ್ಷಣಿಕ ದಾಖಲೆ ಹೊಂದಿರಬೇಕು. ಮಾಸಿಕ 15,000 ರೂ.ಗಳ ವೇತನ ನೀಡಲಾಗುತ್ತದೆ. ವಯೋಮಿತಿ 40 ವರ್ಷದೊಳಗಿರಬೇಕು.

ಇಚ್ಛೆಯುಳ್ಳ ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲಾತಿ ಮತ್ತು ಜೇರಾಕ್ಸ್ ದಾಖಲಾತಿಗಳೊಂದಿಗೆ ಹಾಗೂ ಪಾಸ್‌ಪೋರ್ಟ ಸೈಜ್ ಭಾವಚಿತ್ರದೊಂದಿಗೆ ಮೇಲ್ಕಂಡ ದಿನದಂದು ಸಂದರ್ಶನಕ್ಕೆ ಹಾಜರಾಗಬೇಕು. ನಂತರ ಬಂದ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ದೂರವಾಣಿ ಸಂಖ್ಯೆ 08472-278618ಗೆ ಸಂಪರ್ಕಿಸಲು ಕೋರಲಾಗಿದೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...