NEWSರಾಜಕೀಯ

ಜ್ವರವಿದ್ದರೂ ಚುನಾವಣಾ ಪ್ರಚಾರ: ಸಿಎಂ ಬಿಎಸ್ ವೈ ಬೇಜವಾಬ್ದಾರಿತನಕ್ಕೆ ಸಾಕ್ಷಿಎಂದು ಕಾಂಗ್ರೆಸ್ ಕಿಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಕಠಿಣ ಪರಿಸ್ಥಿತಿಯಲ್ಲಿ ಜ್ವರವಿದ್ದರೂ ಚುನಾವಣಾ ಪ್ರಚಾರ ಮಾಡಿರುವುದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬೇಜವಾಬ್ದಾರಿತನಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ಕಿಡಿ ಕಾರಿದೆ.

ಅತ್ತ ಸಿಎಂ ಬಿಎಸ್ ವೈ ಅವರಿಗೆ 2ನೇ ಬಾರಿಗೆ ಕೋವಿಡ್ ಸೋಂಕು ತಗುಲಿ ಮಣಿಪಾಲ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಇತ್ತ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಮತ್ತು ಯಡಿಯೂರಪ್ಪ ಅವರ ವಿರುದ್ಧ ಕಿಡಿಕಾರಿದೆ.

ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಕಠಿಣ ಪರಿಸ್ಥಿತಿಯಲ್ಲಿ ಜ್ವರವಿದ್ದರೂ ಚುನಾವಣಾ ಪ್ರಚಾರ ಮಾಡಿರುವುದು ಯಡಿಯೂರಪ್ಪ ಅವರ ಬೇಜವಾಬ್ದಾರಿತನಕ್ಕೆ ಸಾಕ್ಷಿ. ಈ ಹಿಂದೆ ಕೊರೊನಾ ಸೋಂಕಿತರಾಗಿದ್ದ ರಮೇಶ್ ಜಾರಕಿಹೊಳಿ ಅವರನ್ನು ಚುನಾವಣಾ ಪ್ರಚಾರಕ್ಕೆ ಆಹ್ವಾನಿಸಿದ್ದರು. ಇಂತಹ ಸರ್ಕಾರದಿಂದ ಸೋಂಕು ನಿಯಂತ್ರಣ ಸಾಧ್ಯವೇ ಎಂದು ಪ್ರಶ್ನೆ ಮಾಡಿದೆ.

ಲಸಿಕೆಗಳ ಪರಿಣಾಮದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಕ್ಕೆ ಇಂದು ಪುರಾವೆ ಸಿಕ್ಕಿದೆಯಲ್ಲ. ಲಸಿಕೆಗಳು ಪರಿಣಾಮಕಾರಿಯಾಗಿದ್ದರೆ ಲಸಿಕೆ ಪಡೆದಿದ್ದ ಯಡಿಯೂರಪ್ಪ ಅವರಿಗೆ ಸೋಂಕು ತಗುಲಿದ್ದು ಹೇಗೆ, ಏಕೆ? ಲಸಿಕೆ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಿ ಸೋಂಕಿನ ಪ್ರಭಾವ ಕಡಿಮೆಗೊಳಿಸುತ್ತದೆಯೇ ಹೊರತು ಅದೇ ಮದ್ದಾಗುವುದಿಲ್ಲ ಎಂದು ಹೇಳಿದೆ.

ಅಂತೆಯೇ ರಾಜ್ಯಾದ್ಯಂತ ಲಸಿಕೆ ಕೊರತೆಯಾಗಿರುವ ವರದಿಗಳು ಪ್ರತಿ ದಿನವೂ ಬರುತ್ತಿವೆ. ಆದರೂ ಆತ್ಮವಂಚನೆಯ ಸುಳ್ಳು ಹೇಳುವ ಬಿಜೆಪಿಗೆ ಕೊಂಚವೂ ಲಜ್ಜೆ ಇದ್ದಂತಿಲ್ಲ. ರಾಜ್ಯ ಸರ್ಕಾರಗಳಿಗೆ ಲಸಿಕೆಗಳನ್ನು ನೇರವಾಗಿ ಖರೀದಿಸುವ ಅನುಮತಿಯನ್ನು ಕೇಂದ್ರ ಏಕೆ ನೀಡುತ್ತಿಲ್ಲ? ಈ ಬಗ್ಗೆ ಧ್ವನಿ ಎತ್ತುವ ಧೈರ್ಯ ಏಕೆ ತೋರುತ್ತಿಲ್ಲ ತಾವು ಎಂದು ಪ್ರಶ್ನೆ ಮಾಡಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ