Breaking NewsNEWSನಮ್ಮಜಿಲ್ಲೆ

ಮೈಸೂರು-ಶಾಸಕರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ: ಸಚಿವ ಎಸ್‌ಟಿಎಸ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಿಸಲು ಶಾಸಕರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲು ನಿರ್ಧರಿಸಲಾಗಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ .ಸೋಮಶೇಖರ್ ಗೌಡ ತಿಳಿಸಿದರು.

ಬುಧವಾರ ಮೈಸೂರಿನ ಚಾಮರಾಜ ವಿಧಾನ ಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಕೋವಿಡ್ 19ಗೆ ಸಂಬಂಧಪಟ್ಟಂತೆ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮದ ಸ್ಥಿತಿಗತಿಗಳ ಪರಿಶೀಲನಾ ಸಭೆ ಬಳಿಕ ಮಾತನಾಡಿ, ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೋವಿಡ್ ಪರೀಕ್ಷೆ ವರದಿ ಬರಲು ತಡವಾಗುವುದನ್ನು ತಪ್ಪಿಸಲು ಹೆಚ್ಚುವರಿಯಾಗಿ ಲ್ಯಾಬ್ ಗಳನ್ನು ತೆರೆಯಲು ತೀರ್ಮಾನಸಲಾಗಿದೆ ಎಂದು ತಿಳಿಸಿದ್ದಾರೆ.

ಕೊವಿಡ್ ವರದಿಯನ್ನು ತಿಳಿದುಕೊಳ್ಳಲು 3 ರಿಂದ 5 ದಿನಗಳು ಬೇಕಾಗುತ್ತದೆ‌.‌ ಈಗಾಗಲೇ 77 ಲ್ಯಾಬ್ ಗಳಿದ್ದು, ಹೆಚ್ಚುವರಿಯಾಗಿ ಲ್ಯಾಬ್ ಗಳನ್ನು ತೆರೆದು ಆದಷ್ಟು ಬೇಗ ಕೊವಿಡ್ ವರದಿಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಮೊದಲು 150 ರಿಂದ 200 ಕೋವಿಡ್ ಪ್ರಕರಣಗಳು ದಾಖಲಾಗುತ್ತಿತ್ತು. ಆದರೆ ಈಗ 2 ರಿಂದ 3 ಸಾವಿರ ಕೊವಿಡ್ ಪ್ರಕರಣಗಳು ದಾಖಲಾಗುತ್ತಿದ್ದು, ಕೊವಿಡ್ ಬಂದವರೆಲ್ಲರೂ ಆಕ್ಸಿಜನೈಟೆಡ್ ಬೆಡ್ ಬೇಕೆಬೇಕು ಎಂಬ ಮನಸ್ಥಿತಿಯನ್ನು ಹೊಂದಿದ್ದಾರೆ. ಎಲ್ಲವನ್ನು ಸರ್ಕಾರಿ ಆಸ್ಪತ್ರೆಗಳು ನಿಯಂತ್ರಿಸುವ ವ್ಯವಸ್ಥೆ ಆಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ರೆಮ್ಡಿಸಿವಿರ್ ಕೇಳುವ ಎಲ್ಲಾ ಆಸ್ಪತ್ರೆಗಳಿಗೂ ಸಹ ಕಳುಹಿಸಿಕೊಡಲಾಗುತ್ತಿದೆ, ಲಸಿಕೆಯನ್ನು ಕ್ರಮಬದ್ದವಾಗಿ ಬಳಸಲು ಹಾಗೂ ಅದನ್ನು ಕಾಳಸಂತೆಯಲ್ಲಿ ಮಾರಾಟವಾಗದಂತೆ ತಡೆಯಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆನ್ ಲೈನ್ ಮೂಲಕ ಹೆಸರನ್ನು ನೋಂದಣಿ ಮಾಡುವವರಿಗೆ ಲಸಿಕೆ ನೀಡುವ ಕ್ರಮವನ್ನು ಕೈಗೋಳ್ಳಲಾಗುತ್ತಿದೆ ಎಂದರು.

ಪ್ರತಿನಿತ್ಯ ಏರಿಕೆಯಾಗುತ್ತಿರುವ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲು ನಿರಂತರವಾಗಿ ಬದಲಾವಣೆಗಳು ನಡೆಯುತ್ತಿದೆ. ಕೊವಿಡ್ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಮಾಡಿರುವ ಕ್ರಮಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಂದಿಗೂ ಸಹ ಮಾರ್ಕೆಟ್ ಗಳಲ್ಲಿ ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಹಾಗೂ ಮಾಸ್ಕ್ ಧರಿಸದೆ ಜನರು ಗುಂಪಾಗಿ ಸೇರುತ್ತಿದ್ದಾರೆ. ಇದು ನಿಲ್ಲಬೇಕು ಎಂದು ಹೇಳಿದರು.

ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ಪಾಲಿಕೆಯ ಮಹಾಪೌರರಾದ ರುಕ್ಮಿಣಿ ಮಾದೇಗೌಡ, ಉಪ ಮಹಾಪೌರರಾದ ಅನ್ವರ್ ಬೆಗ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ನಗರ ಪಾಲಿಕೆ ಆಯುಕ್ತರಾದ ಶಿಲ್ಪ ನಾಗ್, ಮೈಸೂರು ಮೆಡಿಕಲ್ ಕಾಲೇಜಿನ ನಿರ್ದೇಶಕ ಡಾ. ನಂಜರಾಜ ಹಾಗೂ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!!