ನ್ಯೂಡೆಲ್ಲಿ: ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಪ್ರಣಬ್ ಮುಖರ್ಜಿ ಅವರನ್ನು ನ್ಯೂಡೆಲ್ಲಿಯ ಸೇನಾ ರೆಫರಲ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಸೋಮವಾರ ಮೆದುಳಿನ ಶಸ್ತ್ರ ಚಿಕಿತ್ಸೆಗೂ ಅವರನ್ನು ಒಳಪಡಿಸಲಾಗಿತ್ತು.
ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟ ವ್ಯವಸ್ಥೆ (ವೆಂಟಿಲೇಟರ್) ಮಾಡಿ ಚಿಕಿತ್ಸೆ ಮುಂದುವರಿಸಲಾಗಿದೆ. ಅವರ ಚಿಕಿತ್ಸೆ ಮೇಲ್ವಿಚಾರಣೆಯನ್ನು ನುರಿತ ವೈದ್ಯರ ತಂಡ ನಿರಂತರವಾಗಿ ನಡೆಸುತ್ತಿದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail