NEWSನಮ್ಮರಾಜ್ಯ

ಜುಲೈ 5ರಿಂದ 19ರವರೆಗೆ ಕೊರೊನಾ ಅನ್ ಲಾಕ್ ಜಾರಿ: ಏನಿರುತ್ತೆ ಏನಿರಲ್ಲ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇನ್ನು ಮುಂದೆ ವೀಕೆಂಡ್ ಕರ್ಫ್ಯೂ ಇರಲ್ಲ. ಸಭೆ ಸಮಾರಂಭಕ್ಕೆ ಅವಕಾಶ ಇಲ್ಲ. ಜುಲೈ 5ರಿಂದ 19ರವರೆಗೆ ಕೊರೊನಾ ಅನ್ ಲಾಕ್ ಜಾರಿಯಲ್ಲಿರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೊದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರಿ, ಖಾಸಗಿ, ಕೈಗಾರಿಕೆ, ವಾಣಿಜ್ಯ ಚಟುವಟಿಕೆಗಳು, ಮಾಲ್‌ಗಳಿಗೆ ಅನುಮತಿ, ಮೆಟ್ರೋ, ಕಾರ್ಮಿಕ ಕಾರ್ಯಗಳಿಗೆ ಅವಕಾಶ ನೀಡಲಾಗಿದೆ ಎಂದರು.

  • ಯಾವುದಕ್ಕೆಲ್ಲ ವಿನಾಯ್ತಿ..?
    ಸರ್ಕಾರಿ/ಖಾಸಗಿ ಕಚೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
  • ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
  • ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ.100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ.
  • ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ.
  • ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ.
  • ಕೊರೊನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
  • ಪಬ್ ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
  • ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.
  • ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ.
  • ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ.
  • ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.
  • ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರ ಸಮಾರಂಭಗಳಿಗೆ ಅವಕಾಶವಿಲ್ಲ.
  • ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
  • ಚಿತ್ರಮಂದಿರಗಳ ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.
  • ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ.

ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ಸಿಎಂ ವಿನಂತಿಸಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ