ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದ ಇಂದು ದಾಖಲೆಯ 8,852 ಪ್ರಕರಣ ಪತ್ತೆಯಾಗಿದ್ದು 106 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ 8,852 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,35,928ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,608 ಕ್ಕೆ (ಅನ್ಯ ಕಾರಣಕ್ಕೆ 19ಸೇರಿ) ಏರಿಕೆಯಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಹೆಚ್ಚಾಗಿದ್ದು ಇಂದು 7,101 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 3,35,928 ಮಂದಿ ಕೊರೊನಾ ಸೋಂಕಿತರಲ್ಲಿ 2,42,229 ಮಂದಿ ಗುಣಮುಖರಾಗಿದ್ದು ಇನ್ನು 88,091 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರತ ಸೇರಿದಂತೆ ವಿಶ್ವದ ಎಲ್ಲಾ ದೇಶಗಳ ಕೊರೊನಾ ಅಂಕಿ ಅಂಶಗಳನ್ನು ತಿಳಿಯಲು ಇಲ್ಲಿ ಕ್ಲಿಕ್ಕಿಸಿ https://www.worldometers.info/coronavirus
ಬೆಂಗಳೂರಿನಲ್ಲಿ ಇಂದು 2,821 ಮಂದಿ ಕೊರೊನಾಗೆ ಒಳಗಾಗಿದ್ದು, ಸೋಂಕಿತರ ಸಂಖ್ಯೆ 1,27,263ಕ್ಕೆ ಏರಿಕೆಯಾಗಿದೆ. ಇಂದು 27 ಮಂದಿ ಮೃತಪಟ್ಟಿದ್ದು ಒಟ್ಟಾರೆ ಸಾವಿನ ಸಂಖ್ಯೆ 1,938ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಈವರೆಗೆ 87,621 ಮಂದಿ ಗುಣಮುಖರಾಗಿದ್ದು, 37,703 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ತಿಳಿಸಿದೆ.