ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದ ಇಂದು ದಾಖಲೆಯ 8818 ಪ್ರಕರಣ ಪತ್ತೆಯಾಗಿದ್ದು 114 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ 8818 ಕೊರೊನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,19,926 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 3,839 ಕ್ಕೆ (ಅನ್ಯ ಕಾರಣಕ್ಕೆ 8ಸೇರಿ) ಏರಿಕೆಯಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಹೆಚ್ಚಾಗಿದ್ದು ಇಂದು 5,257 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 2,11,108 ಕೊರೊನಾ ಸೋಂಕಿತರಲ್ಲಿ 1,21,242 ಮಂದಿ ಗುಣಮುಖರಾಗಿದ್ದು ಇನ್ನು 80,883 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 3495 ಮಂದಿ ಕೊರೊನಾಗೆ ಒಳಗಾಗಿದ್ದು, ಸೋಂಕಿತರ ಸಂಖ್ಯೆ 87680ಕ್ಕೆ ಏರಿಕೆಯಾಗಿದೆ. ಇಂದು 35 ಮಂದಿ ಮೃತಪಟ್ಟಿದ್ದು ಒಟ್ಟಾರೆ ಸಾವಿನ ಸಂಖ್ಯೆ 1395ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 34858 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ತಿಳಿಸಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇಂದಿನ 15/08/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @sriramulubjp @drashwathcn @BSBommai @mla_sudhakar @iaspankajpandey @Tejasvi_Surya @BBMP_MAYOR @BBMPCOMMhttps://t.co/pZvOjoaHs7 pic.twitter.com/KyRWaMXNLh
— K'taka Health Dept (@DHFWKA) August 15, 2020