ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಬುಧವಾರ ಬರೋಬ್ಬರಿ 9,540 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,21,730ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ ಇಂದು 128 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6827ಕ್ಕೆ (ಅನ್ಯಕಾರಣದಿಂದ 19 ಸೇರಿ) ಏರಿಕೆಯಾಗಿದೆ.
ಕೊರೊನಾ ಸೋಂಕಿನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 41 ಸೋಂಕಿತರು ಸೇರಿ ರಾಜ್ಯದಲ್ಲಿ ಒಟ್ಟು 128 ಮಂದಿ ಮೃತಪಟ್ಟಿದ್ದಾರೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3,419 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,57,044ಕ್ಕೆ ಏರಿಕೆಯಾಗಿದೆ.
ಇಂದು 6,860 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,15,433ಕ್ಕೆ ಏರಿಕೆಯಾಗಿದೆ. 99,470 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 776 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇಂದಿನ 09/09/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @MoHFW_INDIA @UNDP_India @WHOSEARO @UNICEFIndia @sriramulubjp @drashwathcn @BSBommaihttps://t.co/YHtpD6QrYo pic.twitter.com/K0YmtmhrOa
— K'taka Health Dept (@DHFWKA) September 9, 2020