NEWSನಮ್ಮಜಿಲ್ಲೆನಮ್ಮರಾಜ್ಯ

ದುರ್ಬಲ ವರ್ಗಗಳಿಗೆ 5 ಸಾವಿರ ರೂಪಾಯಿ ಸಹಾಯಧನ ನೀಡಲು ಲಕ್ಷ್ಮೀಕಾಂತ್ ರಾವ್ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯ ಸರಕಾರ ಮೇ 10ರವರೆಗೆ ಲಾಕ್ ಡೌನ್ ಮಾಡಿದ್ದು, ಆಟೋ ಡ್ರೈವರ್, ಪೌರ ಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದವರಿಗೆ ತಲಾ 5000 ರೂಪಾಯಿಗಳ ಸಹಾಯಧನವನ್ನು ನೀಡಬೇಕು. ಈ ಮೂಲಕ ರಾಜ್ಯದಲ್ಲಿ ಜನರು ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷ್ಮೀಕಾಂತ್ ರಾವ್ ಆಗ್ರಹಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸೋಮವಾರ ನಗರದ ಪಾರ್ಟಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ದಿನೇದಿನೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಸಾವಿನ ಸಂಖ್ಯೆ ಕೂಡ ಜನತೆಯನ್ನು ಭಯಕ್ಕೆ ತಳ್ಳಿದೆ. ಆಸ್ಪತ್ರೆಗಳಲ್ಲಿ ಬೆಡ್, ಆಮ್ಲಜನಕ, ಆಂಬುಲೆನ್ಸ್ ಇಲ್ಲದೆ ಬಳಲಿ ಹೋಗಿದ್ದಾರೆ. ಇನ್ನಾದರೂ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಕೊಡಿಸುವತ್ತ ಸರ್ಕಾರ ಮುಂದಾಗಬೇಕು ಎಂದರು.

ಸರ್ಕಾರಕ್ಕೆ ಆಮ್ ಆದ್ಮಿ ಪಕ್ಷದ ಸಲಹೆ ಒತ್ತಾಯ
* ಇಂದಿರಾ ಕ್ಯಾಂಟೀನ್ ನ ಊಟವನ್ನು ನಂಬಿ ಅನೇಕರು ಬದುಕುತ್ತಿದ್ದಾರೆ. ಈಗ ಇಂದಿರಾ ಕ್ಯಾಂಟೀನ್ ಮುಚ್ಚುವ ಮೂಲಕ ಅವರ ಹೊಟ್ಟೆಯ ಮೇಲೆ ಹೊಡೆದಂತೆ ಆಗಿದೆ. ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಜನತೆಗೆ ಕನಿಷ್ಠ ಆಹಾರವಾದರೂ ಸಿಗುವಂತೆ ಮಾಡಲು ತಕ್ಷಣ ಇಂದಿರಾ ಕ್ಯಾಂಟೀನ್ ಅನ್ನು ತೆರೆಯಬೇಕು.

* ಪಡಿತರದಲ್ಲಿ ನೀಡುವ ಅಕ್ಕಿಯ ಪ್ರಮಾಣ 10 ಕೆಜಿ ಯಿಂದ ಈಗ 2 ಕೆಜಿಗೆ ಇಳಿಸಲಾಗಿದೆ. ಈ ಅಕ್ಕಿಯಿಂದ ಒಂದು ಕುಟುಂಬವನ್ನು ನಿರ್ವಹಿಸಲು ಸಾಧ್ಯವೇ? ಪಡಿತರ ಅಕ್ಕಿ ಪ್ರಮಾಣವನ್ನು ಸರಕಾರ ತಕ್ಷಣ ಏರಿಸಬೇಕು.

* ರಾಜ್ಯ ಸರಕಾರದ ಸದ್ಯದ ಗುರಿ ಕೊರೊನಾ ಸೋಂಕು ನಿಯಂತ್ರಿಸಿ ಸಮರ್ಪಕ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದು. ಆದರೆ ಸರಕಾರ ಇನ್ನೂ ಸದ್ಯದ ಅಗತ್ಯವಲ್ಲದ ಕಾಮಗಾರಿಗಳ ಮೇಲೆ ಹಣ ವ್ಯಯಿಸುತ್ತಿದೆ. ಹೀಗಾಗಿ ಆಸ್ಪತ್ರೆಗಳು ಆಕ್ಸಿಜನ್, ಬೆಡ್, ಔಷಧ ಮೊದಲಾದ ಕೊರತೆಗಳನ್ನು ಎದುರಿಸುತ್ತಿವೆ. ಸರಕಾರ ಮೆಟ್ರೋ ಮೊದಲಾದ ಕಾಮಗಾರಿಗಳನ್ನು ನಿಲ್ಲಿಸಿ ಆ ಹಣವನ್ನು ರಾಜ್ಯದಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸಲು ಬಳಸಿಕೊಳ್ಳಿ.

* ರಾಜ್ಯದಾದ್ಯಂತ ಎರಡು ದಿನಗಳಿಗೊಮ್ಮೆ ಸ್ಯಾನಿಟೇಷನ್ ಮಾಡಿಸಿ. ಇದರ ಜವಾಬ್ದಾರಿಯನ್ನು ಆಯಾಯ ಪ್ರದೇಶಗಳ ಎಂಎಲ್ಎಗಳಿಗೆ ನೀಡಿ.

* ಕೊರೊನಾ ಸೋಂಕಿನಿಂದ ಸತ್ತವರ ದೇಹವನ್ನು ಮುಖ ಸಮೇತ ಸಂಪೂರ್ಣವಾಗಿ ಮುಚ್ಚಿ ಮನೆಯವರಿಗೂ ಅವರ ಮುಖ ಕಾಣದ ಹಾಗೆ ಮಾಡಲಾಗುತ್ತಿದೆ. ಇದರಿಂದ ಕುಟುಂಬದವರಿಗೆ ಅಂತಿಮ ದರ್ಶನ ಮಾಡಲು ಸಾಧ್ಯವಾಗುತ್ತಿಲ್ಲ! ಹೀಗಾಗಿ ಮೃತ ದೇಹದ ಮುಖವನ್ನು ಪಾರದರ್ಶಕ ವಸ್ತುವಿನಿಂದ ಹೊರಗೆ ಕಾಣುವಂತೆ ಮುಚ್ಚಬೇಕು.

* ದೆಹಲಿ ಸರಕಾರ ಸೋಂಕು ನಿಯಂತ್ರಣಕ್ಕೆ ಕೈಗೊಂಡ ನಿರ್ಧಾರಗಳು, ಸೊಂಕಿತರ ಸಂಖ್ಯೆ, ಆರೋಗ್ಯ ಸೌಲಭ್ಯ ಮೊದಲಾದ ಮಾಹಿತಿಗಳನ್ನು ಸ್ವತಃ ಮುಖ್ಯಮಂತ್ರಿಗಳೇ ನೀಡುತ್ತಿದ್ದಾರೆ. ನಮ್ಮ ರಾಜ್ಯ ಸರಕಾರ ಯಾಕೆ ಯಾವುದೇ ಮಾಹಿತಿ ನೀಡುತ್ತಿಲ್ಲ? ರಾಜ್ಯ ಸರಕಾರ ಕೂಡ ಎಲ್ಲಾ ಮಾಹಿತಿಗಳನ್ನು ಜನತೆಯ ಮುಂದಿಡಬೇಕು.

ಸರಕಾರ ಆಮ್ ಆದ್ಮಿ ಪಕ್ಷದ ಈ ಎಲ್ಲಾ ಸಲಹೆಗಳನ್ನು ಸ್ವೀಕರಿಸಿ ತಕ್ಷಣ ಜಾರಿ ಮಾಡಬೇಕು ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸುತ್ತದೆ ಎಂದರು.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ