NEWSನಮ್ಮರಾಜ್ಯರಾಜಕೀಯ

ಲಾಕ್‌ಡೌನ್‌ ಒಂದು: ಮಾರ್ಗಸೂಚಿಯಲ್ಲಿ ಬದಲಾವಣೆ ಎರಡು: ನಗೆಪಾಟಲಿಗೆ ಗುರಿಯಾಯ್ತ ಸರ್ಕಾರ?

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಮಾರ್ಗಸೂಚಿಯಲ್ಲಿ ಪದೇಪದೆ ಬದಲಾವಣೆ ಆಗುತ್ತಿದೆ. ಇದರಿಂದ ರಾಜ್ಯ ಸರ್ಕಾರ ಸಾರ್ವಜನಿಕ ವಲಯದಲ್ಲಿ ನಗೇಪಾಟಲಿಗೆ ಗುರಿಯಾಗುತ್ತಿದೆ. ಹಾಲಿ ಲಾಕ್‌ಡೌನ್‌ನ ಮೊದಲನೇ ದಿನವೆ ಎರಡು ಬದಲಾವಣೆಗಳನ್ನು ಮಾಡಿದೆ.

ಯಾವುದಕ್ಕೆ ನಿರ್ಬಂಧ, ಯಾವುದಕ್ಕೆ ನಿರ್ಬಂಧವಿಲ್ಲ ಎನ್ನುವುದು ಪ್ರತೀ ಮಾರ್ಗಸೂಚಿಯಲ್ಲೂ ಗೊಂದಲದ ಗೂಡಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣ, ಸರ್ಕಾರ ಹೊರಡಿಸುವ ಮಾರ್ಗಸೂಚಿ ಬಹುತೇಕ ಕನ್ನಡದಲ್ಲಿ ಇಲ್ಲದೇ ಇರುವುದು.

ಈ ಲಾಕ್‌ಡೌನ್, ಜನತಾ ಕರ್ಫ್ಯೂವಿನ ಮುಂದುವರಿದ ಭಾಗ ಎನ್ನುವಂತೆ, ಕೊಂಚ ಬದಲಾವಣೆಗಳನ್ನು ಮಾಡಿ ಮೇ 8ರಂದು ಪರಿಸ್ಕೃತ ಗೈಡ್ಲೈನ್ಸ್ ಅನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿತ್ತು. ಹೊಸ ಮಾರ್ಗಸೂಚಿ ಸೋಮವಾರದಿಂದ (ಮೇ 10) ಜಾರಿಗೆ ಬಂದಿತ್ತು. ಮಾರ್ಗಸೂಚಿಯ ಪ್ರಕಾರ, ಹದಿನಾಲ್ಕು ದಿನಗಳ ಲಾಕ್‌ಡೌನ್ ವೇಳೆ, ಪೊಲೀಸರಿಗೆ ಫ್ರೀಹ್ಯಾಂಡ್ ನೀಡಲಾಗಿತ್ತು.

ಇನ್ನೊಂದು, ಬೆಳಗ್ಗೆ 6ರಿಂದ 10ತ್ತರವರೆಗೆ ಅವಶ್ಯಕ ವಸ್ತುಗಳ ಖರೀದಿಗೆ ವಾಹನವನ್ನು ಬಳಸದಂತೆ ನಿರ್ಬಂಧ ಹೇರಲಾಗಿತ್ತು. ಪೊಲೀಸರಿಗೆ ಫ್ರೀಹ್ಯಾಂಡ್ ಸಿಕ್ಕಿದ್ದೇ ಸಿಕ್ಕಿದ್ದು, ಸಿಕ್ಕಸಿಕ್ಕಲ್ಲಿ ಲಾಠಿ ಬೀಸುವ ದೃಶ್ಯ ಸಾಮಾಜಿಕ ತಾಣದಲ್ಲಿ ವೈರಲ್ ಆಗಿತ್ತು ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿತ್ತು.

ಇದರಿಂದ ಕೂಡಲೇ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಕರೆ ಮಾಡಿ ಲಾಠಿ ಬೀಸದಂತೆ ಸೂಚನೆ ಕೊಟ್ಟರು. ಅದರ ಬೆನ್ನಲ್ಲೇ, ಬೆಂಗಳೂರು ಪೊಲೀಸ್ ಆಯುಕ್ತರು ಲಾಠಿ ಬೀಸದಂತೆ ತಮ್ಮ ಸಿಬ್ಬಂದಿಗೆ ಸೂಚಿಸಿದರು. ಅಲ್ಲಿಗೆ, ಮಾರ್ಗಸೂಚಿಯಲ್ಲಿ ಮೊದಲ ಬದಲಾವಣೆಯಾಯಿತು.

ಇದಾದ ಸ್ವಲ್ಪ ಹೊತ್ತಿನಲ್ಲೇ ಬೆಳಗ್ಗೆ ಅಗತ್ಯ ವಸ್ತುಗಳನ್ನು ಖರೀದಿಸಲು ವಾಹನವನ್ನು ಬಳಸಬಹುದು. ಆದರೆ, ಇದನ್ನೇ ಲಾಭವಾಗಿ ಪಡೆದುಕೊಂಡು ಅಡ್ಡಾದಿಡ್ಡಿ ಸುತ್ತಬೇಡಿ ಎಂದು ಸರ್ಕಾರ ಆದೇಶ ಹೊರಡಿಸಿತು. ಇದಾದ ಬಳಿಕ ಓಡಾಟಕ್ಕೆ ಏನು ತೊಂದರೆ ಇಲ್ಲ ಎಂಬಂತೆ ಪೊಲೀಸರು ಹರಸಾಹಸ ಪಡುತ್ತಿದ್ದರೂ ಜನರು ಮಾತ್ರ ಕೊರೊನಾ ಭಯವಿಲ್ಲದೆ ತಮ್ಮ ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ