NEWSನಮ್ಮರಾಜ್ಯರಾಜಕೀಯ

ಕೊರೊನಾ ಚಿಕಿತ್ಸೆಗೆ ಮೂಲಸೌಕರ್ಯವಿಲ್ಲದೆ ಸಭೆ ನಡೆಸಿ ಪ್ರಯೋಜನವಿಲ್ಲ: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯಲ್ಲಿ ಕೋವಿಡ್‌ ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಸಭೆ ಕರೆದಿದ್ದರೂ, ಅದರಿಂದ ನೂ ಪ್ರಯೋಜನವಿಲ್ಲ. ಕೋವಿಡ್‌ ಚಿಕಿತ್ಸೆಗೆ ಬೇಕಾದ ಯೋಜನೆ ಮತ್ತು ಸೌಲಭ್ಯ ಹೊಂದಿರಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು ಕೋವೀಡ್‌ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಕೈಗೊಳ್ಳುವುದಾಗಿಯೂ, ಈ ಬಗ್ಗೆ ವಿಪಕ್ಷಗಳೊಂದಿಗೆ ಸಭೆ ನಡೆಸುವುದಾಗಿಯೂ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಕೋವಿಡ್‌ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯ ಹೊಂದಿಸಿಟ್ಟುಕೊಳ್ಳದ, ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದ, ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿ ಏನು ಉಪಯೋಗ ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರಗಳಿಗೆ 2ನೇ ಅಲೆ ಕಾಣಿಸಿಕೊಳ್ಳುವ ಎಚ್ಚರಿಕೆಗಳಿದ್ದವು. ಅದನ್ನು ಗಂಭೀರವಾಗಿ ಪರಿಗಣಿಸಿದ್ದರೆ ಪರಿಸ್ಥಿತಿ ಹೀಗಾಗುತ್ತಿರಲಿಲ್ಲ. ಇದೆಲ್ಲದರ ಮಧ್ಯೆ ಕೋವಿಡ್‌ ಚಿಕಿತ್ಸೆಗೆ ಬಳಸಲಾಗುವ ರೆಮ್‌ಡಿಸಿವಿರ್‌ ಎಂಬ ಚುಚ್ಚು ಮದ್ದಿಗೆ ದೇಶದಲ್ಲಿ ಅಭಾವ ಸೃಷ್ಟಿಯಾಗಿದೆ. ಸೋಂಕಿತರಿಗೆ ಚಿಕಿತ್ಸೆಯೇ ಖಾತ್ರಿ ಇಲ್ಲದಂತಾಗಿದೆ.

ರೆಮ್‌ಡಿಸಿವಿರ್‌ ಚುಚ್ಚುಮದ್ದನ್ನು ಇಷ್ಟ ಬಂದಂತೆ ರಫ್ತು ಮಾಡಿದ್ದ ಕೇಂದ್ರ ಸರ್ಕಾರವು ಟೀಕೆಗಳು ಬರುತ್ತಲೇ, ಔಷಧಿಗೆ ಅಭಾವ ಎದುರಾಗುತ್ತಲೇ ರಫ್ತು ನಿಷೇಧಿಸಿದೆ. ಆದರೆ, ಈಗ ಕಾಲ ಮಿಂಚಿದೆ. ಒಂದೆಡೆ ಕೋವಿಡ್‌ ಪ್ರಕರಣಗಳು ದಿಢೀರ್‌ ಏರಿಕೆಯಾಗಿದೆ. ಆದರೆ, ದೇಶದ ಆಸ್ಪತ್ರೆಗಳು ರೆಮ್‌ಡಿಸಿವಿರ್‌ಗಾಗಿ ಕಾದು ಕೂರುವ ಪರಿಸ್ಥಿತಿ ಉದ್ಭವಿಸಿದೆ.

ಈ ಮಧ್ಯೆ ರೆಮ್‌ಡಿಸಿವಿರ್‌ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ, ನಕಲಿ ಔಷಧ ಪೂರೈಕೆಯಾಗುತ್ತಿರುವ ಪ್ರಕರಣಗಳು ವರದಿಯಾಗಿವೆ. ಒಂದೆಡೆ ಔಷಧದ ದಾಸ್ತಾನು ಮಾಡದೇ ವಿಫಲವಾಗಿರುವ ಸರ್ಕಾರ, ಕಾಳ ಸಂತೆ, ನಕಲಿ ಹಾವಳಿ ನಿಯಂತ್ರಿಸದೇ ಅದಕ್ಷತೆ ಮೆರೆದಿದೆ. ಇಲ್ಲಿ ಕೇಂದ್ರ, ರಾಜ್ಯ ಎಂಬ ಮಾತಿಲ್ಲ. ಎರಡೂ ಸರ್ಕಾರಗಳೂ ಕೋವಿಡ್‌ ವಿಷಯದಲ್ಲಿ ಎಡವಿವೆ.

ಕೋವಿಡ್‌ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ, ಎಚ್ಚರಿಕೆಗಳನ್ನು ಕಡೆಗಣಿಸಿ, ನಾಗರಿಕರ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ನಡೆಗಳು ಖಂಡನೀಯ. ಸರ್ಕಾರಗಳು ಕನಿಷ್ಠ, ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನಾದರೂ ದಾಸ್ತಾನು ಮಾಡಿಕೊಳ್ಳಬೇಕು. ಅದಿಲ್ಲದೇ, ಸಭೆಗಳನ್ನು ನಡೆಸಿ ಪ್ರಯೋಜನವಿಲ್ಲ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗದುಕೊಂಡಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ