ಮೈಸೂರು: ಜಿಲ್ಲೆಯಲ್ಲಿ ಇಂದು ಕೊರೊನಾ ಮಹಾಮಾರಿ ತನ್ನ ಆರ್ಭಟವನ್ನು ಸ್ವಲ್ಪಮಟ್ಟಿಗೆ ತಗ್ಗಿಸಿದ್ದು 92 ಪ್ರಕರಣಗಳಷ್ಟೇ ಪತ್ತೆಯಾಗಿದ್ದು, ಸಾವಿನ ಸಂಖ್ಯೆ ಶೂನ್ಯಕ್ಕೆ ಇಳಿದಿದೆ.
ಒಟ್ಟಾರೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,396ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 320ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ ಯಾರೂ ಮುಕ್ತಗೊಂಡು ಮನೆಗೆ ಮರಳಿಲ್ಲ. ಇದರೊಂದಿಗೆ ಈವರೆಗೆ 7,302 ಮಂದಿ ಗುಣಮುಖರಾಗಿದ್ದಾರೆ. ಇನ್ನು 4,774 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ತಿಳಿಸಿದೆ.