NEWSನಮ್ಮರಾಜ್ಯರಾಜಕೀಯ

ಕರ್ನಾಟಕ- ನೋ ಲಾಕ್‌ಡೌನ್‌: ಆದರೆ ಕಠಿಣ ನಿಯಮ ಜಾರಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 14 ದಿನಕ್ಕೆ ಕಠಿಣ ನಿಯಮ ಜಾರಿ ಮಾಡಿ ಸರ್ಕಾರ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಸಂಬಂಧ ರಾತ್ರಿ ಸರ್ಕಾರ ಮುಖ್ಯಕಾರ್ಯದರ್ಶಿ ಸುದ್ದಿಗಾರರೊಂದಿಗೆ ಮಾತನಾಡಿ, ಇಂದಿನಿಂದ ಮೇ 4ರವರೆಗೆ ಈ ಹೊಸ ಕೊರೊನಾ ಮಾರ್ಗಸೂಚಿ ಜಾರಿಯಲ್ಲಿರಲಿದೆ.

ನೈಟ್​ ಕರ್ಫ್ಯೂ ರಾತ್ರಿ 9ರಿಂದಲೇ ಜಾರಿಗೆ ಬರಲಿದ್ದು, ಈ ನಡುವೆ ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 6ರವರೆಗೆ ಕರ್ಫ್ಯೂ ಇರಲಿದೆ ಎಂದು ತಿಳಿಸಿದರು.

ಇನ್ನು ಶಾಲಾ, ಕಾಲೇಜು 7 ದಿನ ಬಂದ್ ಮಾಡಲು ಆದೇಶ. ಸ್ವಿಮ್ಮಿಂಗ್ ಪೂಲ್, ಆಟದ ಮೈದಾನ, ಧಾರ್ಮಿಕ ಕೇಂದ್ರಗಳು ಬಂದ್. ದೇವಸ್ಥಾನಗಳಲ್ಲಿ ಪೂಜಾರಿಗಳು ಮಾತ್ರ ಪೂಜೆ ಮಾಡಬಹುದು.

ಕಟ್ಟಡ ನಿರ್ಮಾಣ ಕಾರ್ಯಗಳಿಗೆ ಯಾವುದೇ ಅಡ್ಡಿ ಇಲ್ಲ. ಏ.23ರ ಬಳಿಕ ಎಲ್ಲ ಮಾರ್ಕೆಟ್​ಗಳು ಶಿಫ್ಟ್​.  ಬಾರ್​ ಮತ್ತು ರೆಸ್ಟೋರೆಂಟ್​ಗಳಲ್ಲಿ ಪಾರ್ಸೆಲ್​ಗೆ ಅವಕಾಶ. ಅಲ್ಲೇ ಮದ್ಯ ಸಮಾರಾಧನೆಗೆ ಅವಕಾಶವಿಲ್ಲ.

ಎಲ್ಲ ಇ ಕಾಮರ್ಸ್ ಡೆಲಿವರಿಗೆ ಅವಕಾಶ ಇರುತ್ತೆ. ಹೋಟೆಲ್​ಗಳಲ್ಲಿ ಪಾರ್ಸೆಲ್​ಗೆ ಮಾತ್ರ ಅವಕಾಶ. ಸೆಲೂನ್, ಬ್ಯೂಟಿ ಪಾರ್ಲರ್ ಓಪನ್ ಇರಲಿವೆ. ಸರ್ಕಾರಿ ಕಚೇರಿಗಳಲ್ಲಿ ಶೇ.50ರಷ್ಟು ಉದ್ಯೋಗಿಗಳು ಬರಲು ಮಾತ್ರ ಅವಕಾಶ.

ಅಂತಾರಾಜ್ಯ ವಾಹನ ಸಂಚಾರಕ್ಕೆ ನಿರ್ಬಂಧವಿಲ್ಲ. ನೈಟ್​ ಕರ್ಫ್ಯೂ ವೇಳೆ ಯಾರೂ ಸಂಚರಿಸುವಂತಿಲ್ಲ. ಮದುವೆ ಸಮಾರಂಭಗಳಲ್ಲಿ 50 ಜನರ ವರೆಗೆ ಭಾಗವಹಿಸಲು ಮಾತ್ರ ಅವಕಾಶ. ಶವ ಸಂಸ್ಕಾರಕ್ಕೆ 20 ಜನರಿಗೆ ಮಾತ್ರ ಅವಕಾಶ.

ವೀಕೆಂಡ್ ಕರ್ಫ್ಯೂ ವೇಳೆ ಬೆಳಗ್ಗೆ 6ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ವಿರಲಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ