ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಶಾಂತಿ ಕಾಲದಲ್ಲಿ ಕಲಹಕ್ಕೆ ಬರುವುದು, ನೆರೆ ಮನೆ ಬೆಂಕಿಯಲ್ಲಿ ಬೇಳೆ ಬೇಯಿಸುವುದು ಕಾಂಗ್ರೆಸ್‌ನ ಜಾಡ್ಯ. ಈ ಅಂಟುರೋಗಕ್ಕೆ ಒಳಗಾದವರು ಸಿದ್ದರಾಮಯ್ಯ. ಲಸಿಕೆ ವಿಚಾರದಲ್ಲಿ ಕಾಂಗ್ರೆಸ್‌ನ ಆತ್ಮವಂಚನೆ ನೆನಪಿಸಿದ್ದಕ್ಕೆ ಸಿದ್ದರಾಮಯ್ಯ ನನ್ನ ವಿರುದ್ಧ ಕಾಲು ಕೆರೆದುಕೊಂಡು ಬಂದಿದ್ದಾರೆ. ಅವರ ಪ್ರತಿ ಎಸೆತಕ್ಕೆ ಸಿಕ್ಸರ್ ಕೊಡಬೇಕೆನಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಕೋವಿಡ್ ಲಸಿಕೆ ವಿಚಾರದಲ್ಲಿನ ಕಾಂಗ್ರೆಸ್‌ನ ಆತ್ಮವಂಚನೆಯನ್ನು ಪ್ರಸ್ತಾಪಿಸಿದ್ದಕ್ಕೆ ನಾನು ಸ್ವಯಂ ಗೋಲು ಹೊಡೆದುಕೊಂಡಿರುವುದಾಗಿ ನೀವು ಹೇಳಿದ್ದೀರಿ. ಸಿದ್ದರಾಮಯ್ಯನವರೇ ಲಸಿಕೆ ವಿಚಾರದಲ್ಲಿ ರಾಷ್ಟ್ರದ ಎದುರು ಬೆತ್ತಲಾಗಿ, ನಿಂತಿರುವುದು ಕಾಂಗ್ರೆಸ್. ಈ ವಿಚಾರದಲ್ಲಿ ನನ್ನನ್ನು ಟೀಕಿಸಲು ಬಂದು ನೀವು ಹಿಟ್ ವಿಕೆಟ್ ಆಗಿದ್ದೀರಿ ಎಂದು ಛೇಡಿಸಿದ್ದಾರೆ.
ಲಸಿಕೆ ವಿಚಾರವಾಗಿ ಕಾಂಗ್ರೆಸ್ ಅನುಮಾನದ ಮಾತುಗಳನ್ನು ಆಡಲಿಲ್ಲವೇ? ಭಾರತದ್ದೇ ಕೋವ್ಯಾಕ್ಸಿನ್‌ನ ಬಗ್ಗೆ ಅಪಪ್ರಚಾರ ಮಾಡಲಿಲ್ಲವೇ? ನಮ್ಮದೇ ಲಸಿಕೆಯನ್ನು ನೀವು ಪ್ರೋತ್ಸಾಹಿಸಬೇಕಿತ್ತೋ ಇಲ್ಲವೋ? ಅದು ಬಿಟ್ಟು ನೀವು ಮಾಡಿದ್ದೇನು? ಅಡಿಗಡಿಗೆ ಲಸಿಕೆ ಮೇಲೆ ಅನುಮಾನ. ಈ ಮೂಲಕ ಭಾರತೀಯ ವಿಜ್ಞಾನಿಗಳ ಅಪಮಾನ. ಇದನ್ನೇ ಅಲ್ಲವೇ ನಾನು ಹೇಳಿದ್ದು ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್‌ನ ಲಸಿಕೆ ರಾಜಕಾರಣವನ್ನು ನಾನು ವಿವರಿಸಿದ್ದೇನೆ. ಕಾಂಗ್ರೆಸ್‌ನ ಅಪಪ್ರಚಾರದಿಂದ ಜನ ಲಸಿಕೆ ಹಾಕಿಸಿಕೊಳ್ಳುತ್ತಿಲ್ಲ ಎಂದು ನಾನು ಹೇಳಿಲ್ಲ. ಲಸಿಕೆಗಾಗಿ ಜನರು ಸಿದ್ದರಾಗಿಯೇ ಇದ್ದಾರೆ. ಕಾಂಗ್ರೆಸ್ ಹೇಳಿದ ಮಾತ್ರಕ್ಕೆ ಜನ ಲಸಿಕೆಯಿಂದ ವಿಮುಖರಾಗಿಲ್ಲ. ಜನ ಕಾಂಗ್ರೆಸ್ ಮಾತು ಕೇಳುತ್ತಾರೆ ಎಂಬ ಭ್ರಮೆ ಸಿದ್ದರಾಮಯ್ಯನವರಿಗೆ ಬೇಡ ಎಂದಿದ್ದಾರೆ.
ಲಸಿಕೆಯೊಂದು ಸಿಕ್ಕಾಗ ಅದನ್ನು ಮೊದಲಿಗೆ ಮುಂಚೂಣಿ ಹೋರಾಟಗಾರರಿಗೆ ನೀಡಲಾಗುತ್ತದೆ. ಇದು ನಿಮಗೆ ತಿಳಿದಿರಲಿ. ದೇಶದಲ್ಲಿ ಮೊದಲು ಕೋವಿಡ್ ವಾರಿಯರ್‌ಗಳಿಗೆ ಲಸಿಕೆ ನೀಡಲಾಯಿತು. ನನ್ನ ಸರದಿ ಬಂದಾಗ ನಾನು ಲಸಿಕೆ ಪಡೆದೆ. ಇಲ್ಲಿ ಕಾಂಗ್ರೆಸ್ ಮಾತು ನಂಬಿ ಕೂರುವಂಥದ್ದೇನಿತ್ತು. ಕಾಂಗ್ರೆಸ್ ಮಾತನ್ನು 50 ವರ್ಷದಿಂದಲೂ ಕೇಳದ ಕುಟುಂಬ ನಮ್ಮದು ಎಂದು ಹೇಳಿದ್ದಾರೆ.
ದೇಶದಲ್ಲಿ ಸರ್ವರಿಗೂ ಉಚಿತ ಲಸಿಕೆ ಹಾಕುವಂತೆ ಸೋನಿಯಾ ಗಾಂಧಿ ಅವರ ಜೊತೆಗೂಡಿ ಎಚ್.ಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯನವರೇ, ದೇಶದ ಹಲವು ವಿರೋಧಪಕ್ಷಗಳ ನಾಯಕರ ಜೊತೆಗೂಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರೇ ಹೊರತು, ಸೋನಿಯಾ ಗಾಂಧಿ ಅವರ ಜೊತೆಗೂಡಿ ಪತ್ರ ಬರೆಯಲಿಲ್ಲ ನೆನಪಿರಲಿ.
ಅಷ್ಟಕ್ಕೂ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರಕ್ಕೆ ಸಹಿ ಮಾಡುವಂತೆ ದೇವೇಗೌಡರಿಗೆ ಯಾರೆಲ್ಲ ವಿನಂತಿಸಿದ್ದರು, ಎಷ್ಟು ಬೇಡಾಡಿದರು ಎಂಬುದು ಸಿದ್ದರಾಮಯ್ಯನವರಿಗೆ ಗೊತ್ತಿದೆಯೇ? ದೆಹಲಿಗೆ ಹೋಗಿ ಈ ವಿಚಾರವಾಗಿ ಸಿದ್ದರಾಮಯ್ಯನವರು ಮಾಹಿತಿ ಪಡೆದು ಬರಲಿ. ಮಾಹಿತಿ ಇಲ್ಲದೇ ಮಾತಾಡುವುದು ಸಿದ್ದರಾಮಯ್ಯನವರಿಗಿರುವ ದೊಡ್ಡ ಸಮಸ್ಯೆ ಎಂದು ಹೇಳಿದ್ದಾರೆ.
ಅಸಮರ್ಪಕ ಲಸಿಕೆ ಅಭಿಯಾನ ವಿರುದ್ಧ ನಮ್ಮದೂ ಆಕ್ಷೇಪಣೆಗಳಿವೆ. ಆದರೆ, ಲಸಿಕೆ ವಿರುದ್ಧ ನಮ್ಮ ನಿಲುವು ಇಲ್ಲ. ಲಸಿಕೆ ಅಭಿಯಾನ ಸಮರ್ಪಕವಾಗಿ ನಡೆಯಬೇಕೆಂದು ಒತ್ತಾಯಿಸಿ ನಾನು ಸರ್ಕಾರಗಳಿಗೆ ಹಲವು ಸಲಹೆ ನೀಡಿದ್ದೇನೆ. ಆದರೆ, ಕಾಂಗ್ರೆಸ್ ಲಸಿಕೆ ವಿರುದ್ಧವೇ ಮಾತಾಡಿತು. ಈಗ ಲಸಿಕೆ, ಲಸಿಕೆ ಎನ್ನುತ್ತಿದೆ. ಇದು ಕಾಂಗ್ರೆಸ್‌ನ ಇಬ್ಬಗೆ ನೀತಿ ಅಲ್ಲವೆ ಎಂದು ಕಿಡಿಕಾರಿದ್ದಾರೆ.
ಸೋಂಕು ಹೆಚ್ಚುತ್ತಿದ್ದರೂ, ಲಾಕ್‌ಡೌನ್ ಜಾರಿಯಲ್ಲಿ ಇದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಬೀದಿಗೆ ಬಿದ್ದಿದ್ದಾರೆ. ಜನರಿಗೆ ನೆರವಾಗುವುದು ಇವರ ಉದ್ದೇಶವಲ್ಲ. ರಾಜಕೀಯ ಮೈಲೇಜ್ ಪಡೆಯುವುದು ಇವರ ಉದ್ದೇಶ. ಜೊತೆಗೆ ಸಿಎಂ ಆಗುವ ಕನಸುಗಳು. ಶಾಂತಿ ಕಾಲದಲ್ಲಿ ಕಾಂಗ್ರೆಸ್ ಕಲಹಕ್ಕೆ ಇಳಿದು ಲಾಭ ಪಡೆಯುತ್ತದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಹೇಳಿದ್ದಾರೆ.
ಲಸಿಕೆಗಾಗಿ ₹100 ಕೋಟಿ ಕೊಟ್ಟಿದ್ದಾಗಿ ಕಾಂಗ್ರೆಸ್ ಹೇಳುತ್ತಿದೆ. ಇದೇನು ಸಿದ್ದರಾಮಯ್ಯನವರ ಮನೆ ಗಂಟೇ? ಕಾಂಗ್ರೆಸ್ ಜನಪ್ರತಿನಿಧಿಗಳ ಕ್ಷೇತ್ರಾಭಿವೃದ್ಧಿ ನಿಧಿಯಲ್ಲವೇ? ಕ್ಷೇತ್ರಾಭಿವೃದ್ಧಿ ನಿಧಿಯನ್ನು ಸರ್ಕಾರಕ್ಕೇ ನೀಡಿರುವುದಾಗಿ ಹೇಳಬೇಕಿದ್ದ ಕಾಂಗ್ರೆಸ್, ಲಸಿಕೆಗಾಗಿ ಕೈಯಿಂದ 100 ಕೋಟಿ ರೂ. ಕೊಟ್ಟಂತೆ ಹೇಳಿದೆ. ಎಂಥ ವಂಚಕ ನಡೆ?
ನಾನು ದೇವೇಗೌಡರ ಸಲಹೆ ಪಡೆದುಕೊಳ್ಳುವುದು ಒಳ್ಳೆಯದು ಎಂದು ನೀವು ಹೇಳಿದ್ದೀರಿ. ದೇವೇಗೌಡರ ಸಲಹೆಯಂತೇ ನಾನು ಸೇರಿದಂತೆ ಪಕ್ಷ ನಡೆಯುತ್ತೇವೆ. ಅದನ್ನು ಹೇಳುತ್ತಿರುವ ತಾವು ಗೌಡರ ಸಲಹೆಯಂತೆ ನಡೆದುಕೊಂಡಿದ್ದೀರೇ? ಸಿದ್ದರಾಮಯ್ಯನವರೇ ಹೇಳಲು ಬಹಳಷ್ಟಿದೆ. ನಾನು ಸುಳ್ಳಾಡಲಾರೆ. ಅದು ನಿಮಗೆ ಹೇಗೆ ಕಾಣುತ್ತದೆ ಎಂಬುದು ನನಗೆ ಅಪ್ರಸ್ತುತ ಎಂದು ತಿಳಿಸಿದ್ದಾರೆ.
Related
You Might Also Like
ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ
ಹುಬ್ಬಳ್ಳಿ: ಚುನಾವಣಾ ಪೂರ್ವ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸಾರಿಗೆ ನೌಕರರಿಗೂ ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7 ನೇ ವೇತನ ಆಯೋಗ ಮಾದರಿಯಲ್ಲಿ) ನೀಡುವಂತೆ...
“ಕೆಎಸ್ಆರ್ಟಿಸಿ ಆರೋಗ್ಯ” ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ನೌಕರರು ಉತ್ತಮ ಆರೋಗ್ಯದಿಂದ ಇರಬೇಕು ಎಂಬ ಸದುದ್ದೇಶದಿಂದ "ಕೆಎಸ್ಆರ್ಟಿಸಿ ಆರೋಗ್ಯ" ಯೋಜನೆಯನ್ನು ರೂಪಿಸಿದ್ದು, ಮುಖ್ಯಮಂತ್ರಿಗಳು...
BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿಗಳು/ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ನೀಡುವುದಕ್ಕೆ ಬೇಕಾದ ದಾಖಲೆಗಳನ್ನು ಸಂಗ್ರಹಿಸಲು ಮೂವರು ಅಧಿಕಾರಿಗಳನ್ನೊಳಗಂಡ ಮೇಲ್ವಿಚಾರಣೆ ತಂಡಗಳನ್ನು ರಚಿಸಿ ವ್ಯವಸ್ಥಾಪಕ...
ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ
ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ-2025 ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿ ಬೆಂಗಳೂರು: ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಹಾಗಾಗಿ...
ಲೋಕ ಸೇವಾ ಆಯೋಗಗಳು ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆ ನೀಡುವ ಪ್ರಜಾ ಪ್ರಭುತ್ವದ ಸ್ತಂಭಗಳು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಲೋಕ ಸೇವಾ ಆಯೋಗಗಳು ಅರ್ಹತೆ ಮತ್ತು ನ್ಯಾಯಪರತೆಯನ್ನು ಎತ್ತಿಹಿಡಿದು, ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆಯನ್ನು ನೀಡುವ ಪ್ರಜಾಪ್ರಭುತ್ವದ ಸ್ತಂಭಗಳಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಜ್ಯ ಲೋಕಸೇವಾ...
KSRTC: ಶಸ್ತ್ರಚಿಕಿತ್ಸೆ ಗೊಳಗಾದ ಚಾಲಕನಿಗೆ ರಜೆ ಕೊಡದೆ ಗೈರು ಹಾಜರಿಹಾಕಿ 4 ತಿಂಗಳ ವೇತನ ತಡೆಹಿಡಿದ ಅಧಿಕಾರಿಗಳು
ಅನಾರೋಗ್ಯದ ನಡುವೆಯೂ ಕಚೇರಿಯಿಂದ ಡಿಪೋಗೆ - ಡಿಪೋನಿಂದ ಕಚೇರಿಗೆ ಅಲೆಯುತ್ತಿರು ಚಾಲಕ ವೇತನಕ್ಕಾಗಿ ಚಾಲಕನ ಅಲೆದಾಟ, ಪರದಾಟ ಆರ್ಥಿಕ ಸಂಕಷ್ಟದಲ್ಲಿ ಕುಟುಂಬ-ಆದರೂ ಕರಗದ ಅಧಿಕಾರಿಗಳ ಮನಸ್ಸು ದೊಡ್ಡಬಳ್ಳಾಪುರ:...
KSRTC ಮಂಡ್ಯ: ಚಾಲಕನ ಮೇಲೆ ವ್ಯಕ್ತಿ ಹಲ್ಲೆ -ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮಂಡ್ಯ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕರ್ತವ್ಯ ನಿರತ ಚಾಲಕನ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ. ಶುಕ್ರವಾರ ರಾತ್ರಿ...
ಯುವ ನಾಯಕತ್ವ ತರಬೇತಿ ಶಿಬಿರ- ವಿಶೇಷ ಶಿಬಿರಗಳಿಂದ ನಾಯಕತ್ವ ಕೌಶಲ್ಯ ವೃದ್ಧಿ
ಬೆಂಗಳೂರು: ನಗರದ ಉಳ್ಳಾಲದಲ್ಲಿರುವ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಲೆದರ್ ಮತ್ತು ಫ್ಯಾಷನ್ ಟೆಕ್ನಾಲಜಿ (ಕಿಲ್ಟ್)ಯಲ್ಲಿ ವಿದ್ಯಾರ್ಥಿಗಳಿಗೆ ಯುವ ನಾಯಕತ್ವ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ದಿ ಆರ್ಟ್ ಆಫ್...
ಹೇಮಗಿರಿಯ ಕಲ್ಯಾಣ ವೆಂಕಟರಮಣ ಸ್ವಾಮಿ ಬೆಟ್ಟದಲ್ಲಿ ವೈಕುಂಠ ಏಕಾದಶಿ ಸಂಭ್ರಮ
ಕೃಷ್ಣರಾಜಪೇಟೆ: ತಾಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಬೃಗು ಮಹರ್ಷಿಗಳ ತಫೋ ಭೂಮಿ ಹೇಮಗಿರಿ ಬೆಟ್ಟದ ಮೇಲೆ ನೆಲೆಸಿರುವ ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಅಂಗವಾಗಿ...
ಜ.19ರ BMTC ಸಂಘದ ಚುನಾವಣೆಯಲ್ಲಿ ಬಳಕೆದಾರ ಸಹಕಾರ ಸಂಘ ಲೂಟಿಕೋರರ ಹೆಡೆಮುರಿ ಕಟ್ಟಿ – ನೊಂದ ನೌಕರರ ಮನವಿ
ಬೆಂಗಳೂರು: ಬಳಕೆದಾರ ಸಹಕಾರ ಸಂಘದಲ್ಲಿ ಎಲ್ಲ ಲೂಟಿ ಮಾಡಿರುವ ಎಸ್.ಜೆ. ಮೇಟಿ ಮತ್ತು ಚುಂಚಯ್ಯ ಸಂಘವನ್ನು ತಮ್ಮ ಸ್ವಂತ ಆಸ್ತಿಯಂತೆ ಬಳಸುತ್ತಿದ್ದಾರೆ ಇಂತವರಿಗೆ ನಿಮ್ಮ ಮತ ಹಾಕಬೇಕೆ...
KSRTC ಹಾಸನ ಹೊಸ ಬಸ್ ನಿಲ್ದಾಣ: ಬಸ್ನಲ್ಲಿ ಮಲಗಿದ್ದ ಚಾಲನಾ ಸಿಬ್ಬಂದಿಗಳ ಮುಖಕ್ಕೆ ಸ್ಪ್ರೇ ಹೊಡೆದು ಕಳವಿಗೆ ಯತ್ನ
ಹಾಸನ: ಕರ್ನಾಕಟ ರಾಜ್ಯ ರಸ್ತೆ ಸಾರಿಗೆ ನಿಗಮದ ಹಾಸನ ಹೊಸ ಬಸ್ ನಿಲ್ದಾಣದಲ್ಲಿ ರಾತ್ರಿ ಪಾಳಿ ತಂಗಿದ್ದ ಬಸ್ಗಳಲ್ಲಿ ನಿರ್ವಾಹಕ ಹಣ ಕೊಳ್ಳೆ ಹೊಡೆಯಲು ಖದೀಮರು ಬಸ್ನಲ್ಲಿ...
KSRTC ನೌಕರರಿಗೆ ನಗದು ರಹಿತ ಚಿಕಿತ್ಸೆ ಶುರು : ಎಲ್ಲಿ ಬೇಕಾದರೂ ಟ್ರೀಟ್ಮೆಂಟ್ ಪಡೆಯಿರಿ
ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ನಗದು ರಹಿತ ಚಿಕಿತ್ಸೆ ಶುರುವಾಗಿದ್ದು ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ನೂರಾರು ನೌಕರರು ಟ್ರೀಟ್ಮೆಂಟ್ ಪಡದುಕೊಳ್ಳಬಹುದು. ಈ...