NEWSನಮ್ಮರಾಜ್ಯ

ಬ್ಲ್ಯಾಕ್‌ ಫಂಗಸ್‌ ತಡೆಗೆ ಸನ್ನದ್ಧರಾಗಿ: ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕಪ್ಪು ಶಿಲೀಂಧ್ರದ (ಬ್ಲ್ಯಾಕ್‌ ಫಂಗಸ್‌) ಸಮಸ್ಯೆಯು ಪಿಡುಗಾಗಿ, ಮಹಾಮಾರಿಯಾಗಿ ಕಾಡುವ ಆತಂಕವನ್ನು ಜನರ ಮುಂದೊಡ್ಡಿದೆ. ಅದರ ಚಿಕಿತ್ಸೆಗೆ ಅಗತ್ಯವಿರುವ Liposomal Amphotericin B ಔಷಧ ಕೊರತೆಯನ್ನು ಕರ್ನಾಟಕ ಎದುರಿಸುತ್ತಿರುವುದು ಬಹಿರಂಗವಾಗಿದೆ. ರಾಜ್ಯದಲ್ಲಿ ಔಷಧದ 1,050 ವಾಯ್ಲ್‌ಗಳು (ಶೀಶೆ) ಮಾತ್ರ ಇವೆ ಎಂಬ ಆಘಾತಕಾರಿ ಅಂಶವು ಭಯ ಸೃಷ್ಟಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಕಪ್ಪು ಶಿಲೀಂಧ್ರ ಸಮಸ್ಯೆ ರಾಜ್ಯದಲ್ಲಿ ಈಗಾಗಲೇ ಗಂಭೀರ ಸ್ವರೂಪದಲ್ಲೇ ಕಾಣಿಸಿಕೊಂಡಿದೆ. ಹಲವರು ಬಲಿಯಾಗಿದ್ದಾರೆ. ಕೋವಿಡ್‌ನಿಂದ ಗುಣವಾಗುವ 400 ಮಂದಿ ಪ್ರತಿ ವಾರ ಈ ಸಮಸ್ಯೆಗೆ ಸಿಲುಕುವ ಸಾಧ್ಯತೆಯನ್ನು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ತಿಳಿಸಿದೆ. ಹೀಗಿರುವಾಗ ಎದುರಾಗಿರುವ ಔಷಧ ಕೊರತೆ ದುರಂತದ ಮುನ್ಸೂಚನೆ ನೀಡುತ್ತಿದೆ ಎಂದು ಸರಣಿ ಟ್ವೀಟ್‌ ಮಾಡಿದ್ದಾರೆ.

Liposomal Amphotericin B ಔಷಧಿಯ 20,000 ವಯಲ್‌ಗಳನ್ನು ಶೀಘ್ರವೇ ಪೂರೈಕೆ ಮಾಡುವಂತೆ ರಾಜ್ಯ ಔಷಧ ಉಗ್ರಾಣ ಕೇಂದ್ರವು ಕೇಂದ್ರ ಸರ್ಕಾರವನ್ನು ಕೋರಿದೆ. ರಾಜ್ಯ ಸರ್ಕಾರ ಕೂಡಲೇ ಕೇಂದ್ರದ ಮೇಲೆ ಒತ್ತಡ ತಂದು ಅಗತ್ಯ ಪ್ರಮಾಣದ ಔಷಧಗಳನ್ನು ತರಿಸಿಕೊಳ್ಳುವುದರತ್ತ ಗಮನಹರಿಸಬೇಕು. ಇಲ್ಲವಾದಲ್ಲಿ ಮತ್ತೊಂದು ಭೀಕರತೆಗೆ ಜನ ಸಿಲುಕುವ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.

ಕಪ್ಪು ಶಿಲೀಂಧ್ರ ಸಮಸ್ಯೆ ಮಹಾರಾಷ್ಟ್ರದಲ್ಲಿ ಹಲವು ತಿಂಗಳಿಗೆ ಮೊದಲೇ ಕಾಣಿಸಿಕೊಂಡಿತ್ತು. ಸಮಸ್ಯೆ ಇಲ್ಲಿಯೂ ಕಾಣಿಸಿಕೊಳ್ಳುವ ಅಪಾಯದ ಬಗ್ಗೆ ತಜ್ಞರು ಹೇಳುತ್ತಲೇ ಬಂದಿದ್ದಾರೆ. ಈ ಸಮಸ್ಯೆ ದೊಡ್ಡದಾಗುವ ಎಚ್ಚರಿಕೆಗಳಿದ್ದರೂ ಔಷಧದ ವ್ಯವಸ್ಥೆ ಮಾಡದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಔಷಧ ಸಂಗ್ರಹ ಈ ಹೊತ್ತಿನ ಅಗತ್ಯ ಎಂದು ಹೇಳಿದ್ದಾರೆ.

ಇದು ಸಂದಿಗ್ಧ ಕಾಲದ ಸೂಕ್ತ ಸಲಹೆ ಎಂದು ಎಲ್ಲರೂ ಭಾವಿಸಿಕೊಳ್ಳಬೇಕು. ಹಲವು ದಿನಗಳಿಂದ ಸರ್ಕಾರಕ್ಕೆ ನಾನು ನೀಡಿದ ಸಲಹೆಗಳನ್ನು ಕೆಲ ಕಿಡಿಗೇಡಿಗಳು ‘ರಾಜಕೀಯ’ವೆಂದು ಭಾವಿಸಿದ್ದಾರೆ. ಪಿಡುಗೊಂದು ಕಾಡುವಾಗ ‘ಹಿಂದೆಂದೂ ನೋಡಿರದಷ್ಟು ಜನಸ್ತೋಮ’ ಸೇರಿಸಿ ರ‍್ಯಾಲಿ ಮಾಡಿದ್ದು, ಜನರನ್ನು ಕಂಡು ಉದ್ಗಾರಿಸಿದ್ದು ನಾವಲ್ಲ ಎಂಬುದು ಅರಿವಲ್ಲಿರಲಿ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ