NEWSದೇಶ-ವಿದೇಶ

ರಿಲಯನ್ಸ್‌ನಿಂದ ಭಾರತದ 880 ನಗರಗಳಲ್ಲಿ ಕೊರೊನಾ ಲಸಿಕಾ ಅಭಿಯಾನ: 19 ಲಕ್ಷ ಜನರಿಗೆ ಲಿಸಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮುಂಬೈ: ರಿಲಯನ್ಸ್​ ಇಂಡಸ್ಟ್ರೀಸ್​ ಲಿಮಿಟೆಡ್​ನಿಂದ ಅತಿದೊಡ್ಡ ಕೊರೊನಾ ಲಸಿಕಾ ಅಭಿಯಾನ ಆರಂಭಿಸಲಾಗಿದ್ದು, ಈ ಅತಿ ದೊಡ್ಡ ಅಭಿಯಾನದಲ್ಲಿ 1.3 ಮಿಲಿಯನ್ ಸಿಬ್ಬಂದಿಗೆ ಹಾಗೂ ಅವರ ಕುಟುಂಬಸ್ಥರಿಗೆ ಲಸಿಕೆ ನೀಡಲಾಗುವುದು. ಭಾರತದ 880 ನಗರಗಳಲ್ಲಿ ಈ ಲಸಿಕಾ ಅಭಿಯಾನ ನಡೆಯಲಿದ್ದು, ಇದು ಸಂಪೂರ್ಣ ಉಚಿತವಾಗಿರಲಿದೆ.

ರಿಲಯನ್ಸ್​ ಇಂಡಸ್ಟ್ರೀಸ್​ನಡಿ ಕೆಲಸ ಮಾಡುವ ಸಿಬ್ಬಂದಿ, ಬಿಪಿ, ಗೂಗಲ್​ ಮುಂತಾದ ಪಾರ್ಟನರ್​ ಸಂಸ್ಥೆಗಳ ಸಿಬ್ಬಂದಿಗೆ ಹಾಗೂ ಅವರ ಕುಟುಂಬಸ್ಥರಿಗೆ ಈ ಕೊರೊನಾ ಲಸಿಕೆ ಹಾಕಲಾಗುವುದು. ಸಿಬ್ಬಂದಿಯ ಹೆಂಡತಿ/ ಗಂಡ, ತಂದೆ-ತಾಯಿ, ಅಜ್ಜ-ಅಜ್ಜಿ, ಅತ್ತೆ-ಮಾವ, ಮಕ್ಕಳು, ಸಹೋದರ-ಸಹೋದರಿಯರು ಕೂಡ ಈ ಅಭಿಯಾನದಲ್ಲಿ ಉಚಿತವಾಗಿ ಲಸಿಕೆ ಪಡೆಯಬಹುದಾಗಿದೆ.

ಆದರೆ ಈ ಸೌಲಭ್ಯ ರಿಲಯನ್ಸ್​ ಇಂಡಸ್ಟ್ರೀಸ್ ಲಿಮಿಟೆಡ್​ನ ಮಾಜಿ ಉದ್ಯೋಗಿಗಳಿಗೆ ಅನ್ವಯವಾಗುವುದಿಲ್ಲ. ಯಾರೆಲ್ಲ ಪ್ರಸ್ತುತ ರಿಲಯನ್ಸ್​ ಅಡಿಯಲ್ಲಿ ಕೆಲಸ ಮಾಡುತ್ತಿದ್ದಾರೋ ಅವರಿಗೆ ಮತ್ತು ಅವರ ಕುಟುಂಬಸ್ಥರಿಗೆ ಮಾತ್ರ ಅನ್ವಯವಾಗಲಿದೆ. ಹಾಗೇ, ರಿಲಯನ್ಸ್​ನಲ್ಲಿ ಕೆಲಸ ಮಾಡಿ, ನಿವೃತ್ತರಾದವರು ಮತ್ತು ಅವರ ಕುಟುಂಬಸ್ಥರು ಕೂಡ ಉಚಿತ ಕೊರೊನಾ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ.

ರಿಲಾಯನ್ಸ್ ಸಂಸ್ಥೆ ತನ್ನ ಉದ್ಯೋಗಿಗಳಿಗೆ ಲಸಿಕೆ ವೆಚ್ಚವಷ್ಟೇ ಅಲ್ಲ ಕೊರೋನಾ ಚಿಕಿತ್ಸಾ ವೆಚ್ಚವನ್ನೂ ಭರಿಸುತ್ತಿದೆ. ರಿಲಾಯನ್ಸ್ ಇಂಡಸ್ಟ್ರೀಸ್ ಗ್ರೂಪ್ ಕಂಪನಿಗಳಲ್ಲಿ ಸುಮಾರು 6 ಲಕ್ಷ ಉದ್ಯೋಗಿಗಳಿದ್ಧಾರೆ. ಅವರ ನೋಂದಾಯಿತ ಕುಟುಂಬ ಸದಸ್ಯರ ಸಂಖ್ಯೆಯನ್ನೂ ಸೇರಿಸಿದರೆ 19 ಲಕ್ಷ ಮಂದಿಯಾಗುತ್ತಾರೆ. ಕೋವಿಡ್ ಸಾಂಕ್ರಾಮಿಕ ಕಾಲದಲ್ಲಿ ಇಷ್ಟೂ ಮಂದಿಯ ಚಿಕಿತ್ಸೆ ಮತ್ತು ಲಸಿಕಾ ವೆಚ್ಚವನ್ನು ಕಂಪನಿಯೇ ಭರಿಸುತ್ತಿದೆ.

ದೇಶದ 800ಕ್ಕೂ ಹೆಚ್ಚು ನಗರಗಳಲ್ಲಿರುವ ರಿಲಯನ್ಸ್​ ಇಂಡಸ್ಟ್ರೀಸ್​ ಲಿಮಿಟೆಡ್​ನ ಪಾರ್ಟನರ್ ಆಸ್ಪತ್ರೆಗಳಾದ ಅಪೋಲೋ, ಮಾಕ್ಸ್, ಮಣಿಪಾಲ್ ಮುಂತಾದ ಆಸ್ಪತ್ರೆಗಳಲ್ಲಿ ರಿಲಯನ್ಸ್​ ಸಿಬ್ಬಂದಿ ಉಚಿತ ಲಸಿಕೆಯನ್ನು ಪಡೆಯಬಹುದು. ಲಸಿಕೆಯನ್ನು ಪಡೆದ ಬಳಿಕ ಅದರ ಬಿಲ್ ನೀಡಿದರೆ ಆ ಹಣವನ್ನು ವಾಪಸ್ ನೀಡುವ ವ್ಯವಸ್ಥೆಯೂ ಇದೆ. ಇದುವರೆಗೂ ರಿಲಯನ್ಸ್​ನ 3.30 ಲಕ್ಷ ಸಿಬ್ಬಂದಿ ಹಾಗೂ ಅವರ ಕುಟುಂಬಸ್ಥರು ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ.

ಜೂನ್ 15ರೊಳಗೆ ರಿಲಯನ್ಸ್​ನ ಎಲ್ಲ ಸಿಬ್ಬಂದಿ ಮತ್ತು ಕುಟುಂಬದ ಸದಸ್ಯರು ಲಸಿಕೆಯ ಮೊದಲ ಡೋಸ್ ಹಾಕಿಸಿಕೊಳ್ಳಲೇಬೇಕೆಂದು ಸೂಚಿಸಲಾಗಿದೆ. ಇಷ್ಟು ಮಾತ್ರವಲ್ಲದೆ ಕೊರೊನಾ ನಿಯಂತ್ರಿಸಲು ಸರ್ಕಾರದೊಂದಿಗೆ ಕೈ ಜೋಡಿಸಿರುವ ರಿಲಯನ್ಸ್ ಇಂಡಸ್ಟ್ರೀಸ್ ಗುಜರಾತ್​ನ ಜಮ್ನಾಗರ್​ದಲ್ಲಿ 1,000 ಹಾಸಿಗೆಗಳುಳ್ಳ ಕೋವಿಡ್​ ಕೇರ್​ ಸೆಂಟರನ್ನು ತೆರೆದಿದೆ. ಈ ಕೋವಿಡ್​ ಕೇರ್​ ಸೆಂಟರ್​ ಮೂಲಕ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡಲು ಮುಂದಾಗಿದೆ. ಆಕ್ಸಿಜನ್​ ಸೌಲಭ್ಯ ಸೇರಿದಂತೆ ಎಲ್ಲಾ ವೈದ್ಯಕೀಯ ವೆಚ್ಚವನ್ನು ರಿಲಯನ್ಸ್​ ಸಂಸ್ಥೆಯೇ ಭರಿಸಲಿದೆ. ಇಲ್ಲಿನ ಮೆಡಿಕಲ್​ ಕಾಲೇಜ್​ನಲ್ಲಿ ಸದ್ಯ 400 ಬೆಡ್​ಗಳ ವ್ಯವಸ್ಥೆ ಮಾಡಲಾಗಿದೆ.

ಕೋವಿಡ್​ ಕೇರ್​ ಸೆಂಟರ್​ಗೆ ಬೇಕಾದ ಮೆಡಿಕಲ್​​ ಉಪಕರಣಗಳು, ಅಗತ್ಯ ಔಷಧ, ಆಕ್ಸಿಜನ್​ ಸಿಲಿಂಡರ್​ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಉಚಿತವಾಗಿ ರಿಲಯನ್ಸ್​ ಸಂಸ್ಥೆ ಒದಗಿಸಿದೆ. ಗುಜರಾತ್​ ಸರ್ಕಾರ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ಒದಗಿಸಿದೆ. ರಾಜ್ಯ ಸರ್ಕಾರ, ರಿಲಯನ್ಸ್​ ಸಂಸ್ಥೆ ಸಹಯೋಗದಲ್ಲಿ ಈ ಕೋವಿಡ್​ ಕೇರ್​ ಸೆಂಟರ್​ ಕಾರ್ಯ ನಿರ್ವಹಿಸುತ್ತಿದೆ. ಈ ಭಾಗದ ಜಾಮ್​​ನಗರ, ಕಬಾಲಿಯಾ, ದ್ವಾರಕ, ಪೋರಬಂದರ್​ ಹಾಗೂ ಸೌರಾಷ್ಟ್ರದ ಜನರಿಗೆ ಈ ಕೋವಿಡ್​ ಸೆಂಟರ್​ ಆಸರೆಯಾಗಲಿದೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...