ನಮ್ಮರಾಜ್ಯ

ಗ್ರಾಮೀಣರಲ್ಲೂ ಕೊರೊನಾ ಹೆಚ್ಚಳ- ಅಂತರಜಿಲ್ಲಾ ಸಂಚಾರ ನಿರ್ಬಂಧಿಸಿ: ಸಿದ್ದರಾಮಯ್ಯ

ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ, ಐಸಿಯು, ವೆಂಟಿಲೇಟರ್  ವ್ಯವಸ್ಥೆ  ಬಲಪಡಿಸಬೇಕು

ವಿಜಯಪಥ ಸಮಗ್ರ ಸುದ್ದಿ

 

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಸೋಂಕು ತ್ವರಿತ ಗತಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಹರಡುತ್ತಿರುವುದು ಆಘಾತಕಾರಿ ಬೆಳವಣಿಗೆ. ರಾಜ್ಯದಲ್ಲಿ ಈಗಿನ ಶೇಕಡಾ 55ರಷ್ಟು ಸೋಂಕಿನ ಪ್ರಕರಣಗಳು ಗ್ರಾಮೀಣ ಪ್ರದೇಶದಿಂದ ವರದಿಯಾಗುತ್ತಿರುವುದನ್ನು ತಜ್ಞರು ಗುರುತಿಸಿದ್ದಾರೆ. ತಿಂಗಳ ಹಿಂದೆ ಈ ಪ್ರಮಾಣ ಶೇಕಡಾ 30 ರಷ್ಟಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಬೆಂಗಳೂರು ನಗರಕ್ಕಷ್ಟೇ ಸೀಮಿತವಾಗದೆ ಜಿಲ್ಲೆ, ತಾಲೂಕು, ಗ್ರಾಮಗಳ ಕಡೆ ಗಮನಹರಿಸಬೇಕಾಗಿದೆ. ಈಗಲೂ ಕಾಲ ಮಿಂಚಿಲ್ಲ, ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ, ಐಸಿಯು, ವೆಂಟಿಲೇಟರ್ ಮತ್ತು ವೈದ್ಯಕೀಯ ಸಿಬ್ಬಂದಿಯ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಸರಣಿ ಟ್ವೀಟ್‌ ಮೂಲಕ ಆಗ್ರಹಿಸಿದ್ದಾರೆ.

ಜಿಲ್ಲೆಗಳಲ್ಲಿ ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣ ವ್ಯವಸ್ಥೆಯ ಹೊಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ವಹಿಸಿಕೊಡಬೇಕು. ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿಯೇ ಮೊಕ್ಕಾಂ ಹೂಡಿ ಮೇಲ್ವಿಚಾರಣೆ ನಡೆಸುವಂತೆ ರಾಜ್ಯ ಸರ್ಕಾರ ಅವರಿಗೆ ತಾಕೀತು ಮಾಡಬೇಕು.

ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ಜಿಲ್ಲಾ ಮಟ್ಟದಲ್ಲಿ ಅನುಸರಿಸಲಾಗಿದ್ದ ಸುರಕ್ಷತಾ ಕ್ರಮಗಳನ್ನು ಎರಡನೇ ಅಲೆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ಕೂಡಾ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಉಲ್ಭಣಗೊಳ್ಳಲು ಕಾರಣ ಎಂದು ಆರೋಪಿಸಿದ್ದಾರೆ.

ಕಳೆದೆರಡು ತಿಂಗಳ ಅವಧಿಯಲ್ಲಿ ಹೆಚ್ಚು ಸೋಂಕಿನ ಪ್ರಕರಣಗಳಿದ್ದ ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಿಂದ ಜನ ಯಾವುದೇ ತಪಾಸಣೆಯಿಲ್ಲದೆ ಇಲ್ಲಿಗೆ ಬಂದಿದ್ದಾರೆ. ಬೆಂಗಳೂರಿನ ಸ್ಥಿತಿ ಬಿಗಡಾಯಿಸಿದ ನಂತರ ಅಲ್ಲಿಂದಲೂ ಜನ ಹಿಂಡುಗಟ್ಟಿಕೊಂಡು ಜಿಲ್ಲೆಗಳಿಗೆ ತೆರಳಿದ್ದಾರೆ. ಅಂತಾರಾಜ್ಯ ಮಾತ್ರವಲ್ಲ ಅಂತರಜಿಲ್ಲಾ ಸಂಚಾರವನ್ನು ನಿರ್ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು ನಗರಕ್ಕೆ ಹೋಲಿಸಿದರೆ ಜಿಲ್ಲೆಗಳಲ್ಲಿ ವೈದ್ಯಕೀಯ ಚಿಕಿತ್ಸಾ ವ್ಯವಸ್ಥೆಯ ತೀವ್ರ ಕೊರತೆಯಿರುವುದು ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿಯೇ ಜಗಜ್ಜಾಹೀರಾಗಿದೆ. 24 ಅಮಾಯಕರನ್ನು ಬಲಿ ತೆಗೆದುಕೊಂಡ ಚಾಮರಾಜನಗರ ಜಿಲ್ಲೆಯ ದುರಂತ ಘಟನೆಯ ನಂತರವೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ಕಿಡಿಕಾರಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...