ವಿಜಯಪಥ ಸಮಗ್ರ ಸುದ್ದಿ
ಕಲಬುರ್ಗಿ: ಕೊರೊನಾ ಸೋಂಕಿಗೆ ಒಳಗಾಗಿದ್ದ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಕಲಬುರ್ಗಿ ಆವೃತ್ತಿಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್ (53) ಚಿಕಿತ್ಸೆ ಫಲಕಾರಿಯಾಗಿದೆ ನಿಧನರಾಗಿದ್ದಾರೆ.
ವಾರದ ಹಿಂದೆ ಸೋಂಕಿಗೆ ಒಳಗಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಮೂರು ದಶಕದಿಂದ ಸಂಯುಕ್ತ ಕರ್ನಾಟಕದ ವರದಿಗಾರರಾಗಿದ್ದ ಅವರು ಇತ್ತೀಚೆಗೆ ಸ್ಥಾನಿಕ ಸಂಪಾದಕರಾಗಿ ಬಡ್ತಿ ಹೊಂದಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.