NEWSನಮ್ಮರಾಜ್ಯ

ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಕೊರೊನಾದಿಂದ ನಿಧನ: ಎಎಪಿ ಸೇರಿ ಹಲವು ಗಣ್ಯರ ಸಂತಾಪ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು : ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ (65) ಇಂದು ಕೊರೊನಾ ಮಹಾಮಾರಿಯಿಂದ ನಿಧನರಾಗಿದ್ದಾರೆ.
ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

1975ರಲ್ಲಿ ಲೋಕವಾಣಿ ದಿನಪತ್ರಿಕೆ ಮೂಲಕ ಪತ್ರಿಕೋದ್ಯಮಕ್ಕೆ ಪದಾರ್ಪಣೆ ಮಾಡಿದ ಅವರು, ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಹೊರಳು ನೋಟ ಅಂಕಣ ಬರೆಯುತ್ತಿದ್ದರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಸೇವೆ ಸಲ್ಲಿಸಿರುವ ಅವರು `ಈ ಬಾನುವಾರ’ ಪತ್ರಿಕೆಯ ಸಂಪಾದಕರಾಗಿದ್ದರು.

ಮಹದೇವ ಪ್ರಕಾಶ್ ಅವರ ನಿಧನಕ್ಕೆ ಸಿಎಂ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ.

ಮಹದೇವ್ ಪ್ರಕಾಶ್ ನಿಧನಕ್ಕೆ ಎಎಪಿಯ ಪೃಥ್ವಿರೆಡ್ಡಿ ತೀವ್ರ ಸಂತಾಪ
ಮಹದೇವ್ ಪ್ರಕಾಶ್ ಅವರ ನಿಧನ ತೀವ್ರ ಆಘಾತಕಾರಿ ಹಾಗೂ ದುಃಖದ ಸಂಗತಿಯಾಗಿದೆ. ಅವರು ಕನ್ನಡದ ಪತ್ರಿಕೋದ್ಯಮದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪನ್ನು ಮೂಡಿಸಿ ರಾಜಕೀಯ ವಲಯದಲ್ಲಿಯೂ ಸಹ ಸಾಕಷ್ಟು ಹಿರಿಮೆ ಗರಿಮೆಯನ್ನು ಗಳಿಸಿಕೊಂಡಿದ್ದರು.

ವ್ಯವಸ್ಥೆಯ ಬದಲಾವಣೆಗಾಗಿ ಸಾಕಷ್ಟು ಮಿಡಿಯುತ್ತಿದ್ದರು. ಅವರ ಅಗಲಿಕೆ ಕನ್ನಡ ಪತ್ರಿಕೋದ್ಯಮಕ್ಕೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದ್ದು ಆಮ್ ಆದ್ಮಿ ಪಕ್ಷವು ಈ ಮೂಲಕ ತೀವ್ರ ಸಂತಾಪವನ್ನು ವ್ಯಕ್ತ ಪಡಿಸುತ್ತಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ಅವರ ಕುಟುಂಬ ವರ್ಗಕ್ಕೆ ಹಾಗೂ ಅವರ ಅಪಾರ ಮಿತ್ರ ಬಂಧು ಬಳಗಕ್ಕೆ ನೀಡಲೆಂದು ಈ ಮೂಲಕ ಪ್ರಾರ್ಥಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ