CrimeNEWSನಮ್ಮರಾಜ್ಯಸಿನಿಪಥ

ಹಿರಿಯ ಪೋಷಕ ನಟ ಶಂಖನಾದ ಅರವಿಂದ್‌ ಇನ್ನಿಲ್ಲ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಿನಿ ಸುದ್ದಿ
ಬೆಂಗಳೂರು: ಬೆಟ್ಟದ ಹೂವು ಕನ್ನಡ ಚಿತ್ರದ ಮೂಲಕ ಚಿರಪರಿಚಿತರಾದ ಹಿರಿಯ ಚಲನ ಚಿತ್ರ ಪೋಷಕ ನಟ ಶಂಖನಾದ ಅರವಿಂದ್ (70 ) ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ.

13 ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಾಗಿ ಅಂದಿನಿಂದ ಅರವಿಂದ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 1 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ.

ಶಂಖನಾದ, ಕಾಡಿನ ಬೆಂಕಿ, ಪ್ರಥಮ ಉಷಕಿರಣ, ಅನುಭವ ಸೇರಿದಂತೆ 250ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ ಕಲಾವಿದ ಅರವಿಂದ್ ಮೃತಪಟ್ಟಿರುವ ಬಗ್ಗೆ ಅವರ ಪುತ್ರಿ ಮಾನಸ ಹೊಳ್ಳ ತಮ್ಮ ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದಾರೆ. “ಸತತ 13 ದಿನಗಳು ಆಸ್ಪತ್ರೆಯಲ್ಲಿ ಹೋರಾಟ ನಡೆಸಿ ಇಂದು 1 ಗಂಟೆಗೆ ದೈವದೀನರಾಗಿದ್ದಾರೆಂದು ತಿಳಿಸಲು ವಿಶಾದಿಸುತ್ತೇನೆ. ನಮ್ಮ ತಂದೆಯವರು Shankhanaada Aravinda Kalarunda Aravind MA” ಎಂದು ಅವರು ಬರೆದುಕೊಂಡಿದ್ದಾರೆ.

ಮೃತರು ಮೂವರು ಮಕ್ಕಳನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ