ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಪೊಲಿಸ್ ಹಿರಿಯ ಅಧಿಕಾರಿಗಳ ಸಹಕಾರದಿಂದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಕಾರ್ಯಕ್ರಮ ಸರಿಗಮಪ ಶೋಗೆ ಪ್ರವೇಶಿಸುವ ಮೂಲಕ ನಾಡಿನ ಜನತೆಗೆ ಚಿರಪರಿಚಿತರಾಗಿರುವ ಪೊಲೀಸ್ ಕಾನ್ಸ್ಟೇಬಲ್ ಸುಬ್ರಮಣಿ ಅವರ ಪತ್ನಿ ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ.
ವಾರದ ಹಿಂದೆ ಸುಬ್ರಮಣಿ ಅವರ ಪತ್ನಿಗೆ ಕೊರೊನಾ ದೃಢಪಟ್ಟಿತ್ತು. ಎರಡು ದಿನದ ಹಿಂದೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಪತ್ನಿಗೆ ಚಿಕಿತ್ಸೆ ಕೊಡಿಸಲು ಸುಬ್ರಮಣಿ ಬೆಂಗಳೂರಿನಲ್ಲಿ ಆಸ್ಪತ್ರೆಗಳನ್ನು ಸುತ್ತಾಡಿದ್ದರು. ಆದರೆ, ಬೆಂಗಳೂರಿನ ಯಾವುದೇ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಬೆಡ್ ಸಿಕ್ಕಲಿಲ್ಲ.
ಕೊನೆಗೆ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಸೋಮವಾರ ಕೊನೆಯುಸಿರೆಳೆದಿದ್ದಾರೆ.