NEWSನಮ್ಮರಾಜ್ಯ

ಕೊರೊನಾ ಲಾಕ್‌ಡೌನ್‌ – ಇಂದಿನಿಂದ ರಾಜ್ಯಸ್ತಬ್ಧ: ಅನಾವಶ್ಯಕವಾಗಿ ರಸ್ತೆಗಿಳಿದರೆ ಲಾಠಿ ಲಾತ, ವಾಹನ ಜಪ್ತಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ವಿಧಿಸಿರುವ 2 ವಾರಗಳ ಸೆಮಿ ಲಾಕ್ಡೌನ್ ಸೋಮವಾರ ಬೆಳಗ್ಗೆಯಿಂದಲೇ ಜಾರಿಗೆ ಬಂದಿದ್ದು, ಶತಾಯಗತಾಯ ಜನ ಸಂಚಾರವನ್ನು ನಿರ್ಬಂಧಿಸಲು ರಾಜ್ಯದಾದ್ಯಂತ ಪೊಲೀಸರು ಸಜ್ಜಾಗಿದ್ದಾರೆ.

ಲಾಕ್ಡೌನ್ ಹಿನ್ನೆಲೆಯಲ್ಲಿ ಅನಗತ್ಯ ಓಡಾಟಕ್ಕೆ ಬಹುತೇಕ ಬ್ರೇಕ್ ೀಗಾಗಲೇ ಬಿದ್ದಿದ್ದು, ಅಗತ್ಯ ವಸ್ತುಗಳ ಖರೀದಿಗೂ ಜನರು ವಾಹನಗಳಲ್ಲಿ ಓಡಾಡುವುದಕ್ಕೂ ಬಹುತೇಕ ಬ್ರೇಕ್‌ ಬಿದ್ದಿದೆ. ಹೀಗಾಗಿನಡೆದುಕೊಂಡೇ ಹೋಗಿ ಅಗತ್ಯ ವಸ್ತು ಖರೀದಿ ಮಾಡಿ ಬರುತ್ತಿದ್ದಾರೆ.

ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೆ ಕೇವಲ 4 ತಾಸು ದಿನಸಿ, ತರಕಾರಿ, ಮಾಂಸ, ಮೀನು ಸೇರಿದಂತೆ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ತದನಂತರದಲ್ಲಿ ಯಾವುದೇ ಅಗತ್ಯ ವಸ್ತುಗಳ ಮಾರಾಟಕ್ಕೂ ಅವಕಾಶವಿಲ್ಲ.

ವ್ಯಾಪಾರ ವಹಿವಾಟಿಗೆ ನೀಡಿರುವ ಸಮಯದಲ್ಲಿ ಜನರು ಖರೀದಿಗಾಗಿ ಅಂಗಡಿಗಳಿಗೆ ನಡೆದುಕೊಂಡೇ ಹೋಗಬೇಕು. ವಾಹನ ಬಳಕೆ ಮಾಡಿದ ಹಲವು ಮಂದಿಯ ವಾಹನಗಳನ್ನು ಈಗಾಗಲೇ ಪೊಲೀಸರು ಜಪ್ತಿ ಮಾಡಿದ್ದಾರೆ.

ಲಾಕ್ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್‌ ಅವರು, ಯಾರೂ ರಸ್ತೆಗಿಳಿಯದಂತೆ ಮನವಿ ಮಾಡಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಡಿಜಿಪಿ, ದಯವಿಟ್ಟು ಲಾಕ್ಡೌನ್‌ನ್ನು ಗಂಭೀರವಾಗಿ ತೆಗೆದುಕೊಳ್ಳಿ. ಇದು ಎಲ್ಲರ ಸುರಕ್ಷತೆಗಾಗಿ ಆಗಿದೆ… ನಿಯಮಗಳನ್ನು ಪಾಲಿಸದೇ ಹೋದಲ್ಲಿ ನಿಮ್ಮ ವಾಹನವನ್ನು ಎರಡು ವಾರಗಳ ಕಾಲ ಜಪ್ತಿ ಮಾಡಲಾಗುತ್ತದೆ. ಅದಕ್ಕೆ ಸಿದ್ಧರಾಗಿ ಎಂದು ಹೇಳಿದ್ದಾರೆ.

ಇನ್ನು ಕರ್ನಾಟಕದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ಈ ಬಗ್ಗೆ ಪ್ರಧಾನಮಂತ್ರಿ ಮೋದಿ ಸಿಎಂ ಬಿಎಸ್‌ವೈ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ