NEWSನಮ್ಮಜಿಲ್ಲೆ

24 ಕೋವಿಡ್ ರೋಗಿಗಳ ಸಾವು ಸರ್ಕಾರಿ ಪ್ರಾಯೋಜಿತ ಕೊಲೆ: ಆಲಗೂಡು ಶಿವಕುಮಾರ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ತಿ.ನರಸೀಪುರ: ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ನಡೆದಿರುವ 24 ಕೋವಿಡ್ ರೋಗಿಗಳ ಸಾವು ಸರ್ಕಾರಿ ಪ್ರಾಯೋಜಿತ ಕೊಲೆಯಾಗಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ಆಲಗೂಡು ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ದೇಶದಲ್ಲಿ ಕಳೆದ ಆರು ತಿಂಗಳ ಮುಂಚಿತವಾಗಿಯೇ “ಕೋವಿಡ್ ನಿರ್ವಹಣೆ ತಜ್ಞರ ಸಮಿತಿ” ಎರಡನೆಯ ಅಲೆಯನ್ನು ಎದುರಿಸುವ ನಿಟ್ಟಿನಲ್ಲಿ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಲಾಗಿತ್ತಾದರೂ ಈ ಸರ್ಕಾರಗಳು ಕೊರೊನಾ ಎರಡನೇ ಅಲೆಯನ್ನು ತಡೆಯಲು ಸಂಪೂರ್ಣ ವಿಫಲವಾಗಿವೆ ಎಂದು ದೂರಿದರು.

ಉತ್ತರ ಭಾರತದ ಕುಂಭಮೇಳ ಮತ್ತು ಪಂಚರಾಜ್ಯಗಳ ಮತ್ತು ರಾಜ್ಯದ ಉಪ ಚುನಾವಣೆಗಳ ಗುಂಗಿನಲ್ಲಿದ್ದ ಸರ್ಕಾರಗಳು ಜವಾಬ್ದಾರಿಯನ್ನು ಮರೆತಿದ್ದು, ತನ್ನ ದ್ವಂದ್ವ ನಿಲುವುಗಳು ಹಾಗೂ ತಜ್ಞರ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸದ ಕಾರಣ ಕೋವಿಡ್ ನಿಂದಾಗಿ ಹೆಚ್ಚಾಗಿ ಸಾವು ನೋವುಗಳು ಸಂಭವಿಸುವಂತಾಗಿದೆ. ಇದರ ಫಲವೇ ಚಾ.ನಗರದಲ್ಲಿ ಇಂತಹ ದುರ್ಘಟನೆ ನಡೆಯಲು ಕಾರಣವಾಗಿದೆ ಎಂದರು.

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಮಾಯಕ, ಮುಗ್ದ ಜೀವಗಳು ಚಾಮರಾಜನಗರದಲ್ಲಿ ಬಲಿಯಾಗಿದ್ದು ನಿಜಕ್ಕೂ ದುರಂತ. ಈ ದುರಂತದ ಘಟನೆಯನ್ನು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು.

ಮೃತರ ಕುಟುಂಬಕ್ಕೆ ತಲಾ 50 ಲಕ್ಷ ರುಪಾಯಿ ಪರಿಹಾರ ಮಂಜೂರು ಮಾಡಬೇಕು. ಈ ದುರಂತದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ರಾಜಿನಾಮೆ ನೀಡಬೇಕಾಗಿ ದಸಂಸ ಆಗ್ರಹಿಸುತ್ತದೆ.

ಇಲ್ಲದಿದ್ದಲ್ಲಿ ಕೊರೊನಾದ ಎಲ್ಲಾ ಮಾರ್ಗಸೂಚಿಗಳನ್ನು ಧಿಕ್ಕರಿಸಿ ಸರ್ಕಾರದ ಜನವಿರೋಧಿ ನಿಲುವುಗಳನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಆಲಗೂಡು ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ