Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ಕೊರೊನಾ ಸೋಂಕಿತರ ಶವಗಳ ಅಂತ್ಯ ಸಂಸ್ಕಾರಕ್ಕೆ ಕನಿಷ್ಠ ವ್ಯವಸ್ಥೆ ಮಾಡುವಲ್ಲಿಯೂ ಕೈ ಚೆಲ್ಲಿ ಕುಳಿತಿರುವ ಸರ್ಕಾರ: ಎಚ್‌ಡಿಕೆ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಚಿಕಿತ್ಸೆ ದಕ್ಕದೆ ಅತ್ಯಂತ ಅಮಾನವೀಯವಾಗಿ ಸಾವನ್ನಪ್ಪಿದ ಕೊರೊನಾ ಸೋಂಕಿತರ ಶವಗಳ ಗೌರವಯುತ ಅಂತ್ಯ ಸಂಸ್ಕಾರಕ್ಕೆ ಕನಿಷ್ಠ ವ್ಯವಸ್ಥೆಯನ್ನು ಮಾಡುವಲ್ಲಿ ಕೈ ಚೆಲ್ಲಿ ಕುಳಿತಿರುವ ರಾಜ್ಯ ಸರ್ಕಾರದ ವೈಫಲ್ಯ ಅತ್ಯಂತ ಬೇಜವ್ದಾರಿತನದ ನಿರ್ದಯಿ ವರ್ತನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ಸೋಂಕಿತರಿಗೆ ಬೆಡ್ ಗಳನ್ನು, ಆಕ್ಸಿಜನ್, ವೆಂಟಿಲೇಟರ್ ಹಾಗೂ ಲಭ್ಯವಿರುವ ಉಪಶಮನದ ಔಷಧಗಳನ್ನು ಸರಕಾರ ಕೊಡಲಿಲ್ಲ. ಕನಿಷ್ಠ ಅವರ ಅಂತ್ಯಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಅತ್ಯಂತ ನೋವಿನಿಂದ ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಭಾವುಕರಾಗಿ ಬೇಡಿಕೊಂಡಿದ್ದಾರೆ.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ವ್ಯವಸ್ಥೆ ಮಾಡುವಲ್ಲಿ ಮುಗ್ಗರಿಸಿ ಬಿದ್ದ ಸರಕಾರ ಅಂತ್ಯಸಂಸ್ಕಾರಕ್ಕಾದರೂ ಜಾಗದ ವ್ಯವಸ್ಥೆ ಮಾಡುವಲ್ಲಿ ಇನ್ನೂ ತಡಮಾಡದೆ ಕೈ ಕಟ್ಟಿ ಕೂರಬಾರದು ಎಂದು ಆಗ್ರಹಿಸಿದ್ದಾರೆ.

ಇಲ್ಲದಿದ್ದರೆ, ಜನರ ಹಿಡಿಶಾಪ ಸರಕಾರಕ್ಕೆ ತಗಲುವುದರಲ್ಲಿ ಸಂಶಯವೇ ಬೇಡ. ಸಾವನ್ನಪ್ಪಿದ ಕೊರೊನಾ ಸೋಂಕಿತರ ಬಂಧು ಬಳಗದವರು ಪಡುತ್ತಿರುವ ಬವಣೆಯನ್ನು ಕಂಡರೆ, ಹೃದಯ ಕಿವುಚಿದಂತಾಗುತ್ತದೆ ಎಂದು ಹೇಳಿದ್ದಾರೆ.

ಕೊರೊನಾ ಮಹಾಮಾರಿಯಿಂದ ಜೀವ ತೆತ್ತ ವ್ಯಕ್ತಿಗಳ ಶವಸಂಸ್ಕಾರಕ್ಕೆ ಬೆಂಗಳೂರಿನ ಅಷ್ಟ ದಿಕ್ಕುಗಳಲ್ಲಿನ ಡೀಮ್ಡ್ ಅರಣ್ಯ ಪ್ರದೇಶದಲ್ಲಿ ದಿನವೊಂದಕ್ಕೆ ಸುಮಾರು 25 ಶವಗಳನ್ನು ಅಂತ್ಯಸಂಸ್ಕಾರ ಮಾಡಲು ಸರಕಾರ ತಕ್ಷಣವೇ ಸಮರೋಪಾದಿಯಲ್ಲಿ ಕ್ರಮಕೈಗೊಳ್ಳಬೇಕೆಂದು ಸರಣಿ ಟ್ವೀಟ್‌ ಮೂಲಕ ಆಗ್ರಹಿಸಿದ್ದಾರೆ.

ಬೆಂಗಳೂರಿನ ಎಂಟೂ ದಿಕ್ಕುಗಳಲ್ಲೂ ಮರಗಳಿಲ್ಲದ ಬೆಂಗಾಡು ಅರಣ್ಯ ಭೂಮಿಯಿದೆ. ಇಲ್ಲಿ ಪ್ರತಿದಿನ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತಿಮ ಸಂಸ್ಕಾರಕ್ಕೆ ಕೂಡಲೇ ವ್ಯವಸ್ಥೆ ಮಾಡಬೇಕು. ಸರಕಾರ ಇದನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದು ಸರ್ಕಾರದ ಅತ್ಯಂತ ಬೇಜವ್ದಾರಿತನದ ನಿರ್ದಯಿ ವರ್ತನೆ ವಿರುದ್ಧ ಕಾರವಾಗಿಯೇ ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್ ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ