NEWSದೇಶ-ವಿದೇಶರಾಜಕೀಯ

ರಾಜ್ಯ18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವಲ್ಲಿಯೂ ಕೇಂದ್ರದ ತಾರತಮ್ಯ: ಎಚ್‌ಡಿಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ತೀವ್ರಗೊಳ್ಳುತ್ತಿದ್ದು, ಈ ನಡುವೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗುತ್ತಿದೆ. ಇದರಲ್ಲೂ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ತೋರುತ್ತಿದ್ದು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಪ್ರಧಾಣಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

18-44 ವಯೋಮಾನದವರಿಗೆ ಲಸಿಕೆ ಹಾಕುವ ಅಭಿಯಾನ ಮೇ 1ರಿಂದ ಆರಂಭವಾಗಿದೆ. ದೇಶದಲ್ಲಿ ಮಂಗಳವಾರದ ಹೊತ್ತಿಗೆ 6 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ ಗುಜರಾತ್‌ನಲ್ಲಿ 1,61,000 ಜನರಿಗೆ ಲಸಿಕೆ ಹಾಕಲಾಗಿದ್ದರೆ, ಕರ್ನಾಟಕದಲ್ಲಿ ಕೇವಲ 3,475 ಜನರಿಗೆ ಮಾತ್ರ ಲಸಿಕೆ ನೀಡಲಾಗಿದೆ. ಇದು ಕೇಂದ್ರದ ತಾರತಮ್ಯವೋ, ರಾಜ್ಯದ ವೈಫಲ್ಯವೋ ಎಂದು ಸರಣಿ ಟ್ವೀಟ್‌ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.

ಕರ್ನಾಟಕ ಮತ್ತು ಕನ್ನಡಿಗರಿಗೆ ತಾರತಮ್ಯವಾಗುತ್ತಿರುವುದು, ಗುಜರಾತ್‌ ಮೇಲೆ ಅತಿಯಾದ ಪ್ರೀತಿ ತೋರುತ್ತಿರುವುದು ಕೇಂದ್ರದ ಆರೋಗ್ಯ ಇಲಾಖೆ ನೀಡಿರುವ ಅಂಕಿ ಅಂಶಗಳಿಂದಲೇ ಬಹಿರಂಗವಾಗಿದೆ. ಈ ಸಂಕಷ್ಟದ ಪರಿಸ್ಥಿತಿಯಲ್ಲೂ ಕೇಂದ್ರದಿಂದ ಆಗುತ್ತಿರುವ ಈ ತಾರತಮ್ಯ ಮನುಷ್ಯತ್ವ ವಿರೋಧಿ. ಕನ್ನಡಿಗರಿಗಾಗಿ ಸೊಲ್ಲೆತ್ತದ ರಾಜ್ಯ ಸರ್ಕಾರದ ಪರಮ ವೈಫಲ್ಯ ಎಂದು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯಕ್ಕೆ ಕೇಂದ್ರ ಸರ್ಕಾರ ಲಸಿಕೆ ನೀಡುತ್ತಿಲ್ಲವೇ? ರಾಜ್ಯಕ್ಕೆ ಏನು ಬೇಕೋ ಅದನ್ನು ಕೇಳಿ ಪಡೆಯಲು ರಾಜ್ಯ ಸರ್ಕಾರಕ್ಕೆ ಶಕ್ತಿ ಇಲ್ಲವೇ? ಇತರ ರಾಜ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದನ್ನು ಪ್ರಶ್ನಿಸಲು ನಮ್ಮವರಿಗೆ ಬಾಯಿಲ್ಲವೇ? ಇದೆಲ್ಲ ಗಮನಿಸುತ್ತಿದ್ದರೆ, ಕನ್ನಡರಿಗರನ್ನು ಈ ಸರ್ಕಾರಗಳು ಹಣೆಬರಹಕ್ಕೆ ಬಿಟ್ಟಂತೆ ಕಾಣುತ್ತಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಬಿಜೆಪಿ ಸರ್ಕಾರ, ಸಂಸದರು ಮೊದಲು ಈ ತಾರತಮ್ಯದ ವಿರುದ್ಧ ಹೋರಾಡಬೇಕು. ಜನರ ಜೀವ ಉಳಿಸಲು ಬೇಕಾಗಿರುವುದನ್ನು ಕೇಂದ್ರದಿಂದ ಕೇಳಿ ಪಡೆದುಕೊಳ್ಳಬೇಕಾದದ್ದು ಈ ಹೊತ್ತಿನ ಅಗತ್ಯ. ಲಸಿಕೆ ಅಭಿಯಾನದಲ್ಲಿ ಆಗುತ್ತಿರುವ ಈ ತಾರತಮ್ಯ, ವೈಫಲ್ಯಗಳನ್ನು ರಾಜ್ಯದ ಜನರೂ ಪ್ರಶ್ನೆ ಮಾಡಬೇಕಾಗಿದೆ. ಇಲ್ಲವಾದಲ್ಲಿ ಅಪಾಯದ ದಿನಗಳು ಮುಂದಿವೆ ಎಂದು ಎಚ್ಚರಿಕೆ ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!!