NEWSನಮ್ಮರಾಜ್ಯ

ಸೋಂಕು ತಡೆಯಲಿಕ್ಕಾಗದ ರಾಜ್ಯ ಸರ್ಕಾರ ಜನತೆಯ ಮುಂದೆ ಬೆತ್ತಲಾಗುತ್ತಿದೆ: ಮಾಜಿ ಸಿಎಂ ಸಿದ್ದರಾಮಯ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾದಿಂದ ರಕ್ಷಿಸಿಕೊಳ್ಳಲು ಜನತೆಗೆ ನಿಯಮ-ನಿರ್ಬಂಧ-ಮಾರ್ಗಸೂಚಿಗಳ ಉಪದೇಶ ಮಾಡುವುದರ ಜೊತೆಗೆ, ಕೊರೊನಾ ಎದುರಿಸಲು
ರಾಜ್ಯ ಸರ್ಕಾರ ಏನು‌ ಮಾಡಿದೆ‌ ಎನ್ನುವುದನ್ನು ಜನತೆಗೆ ತಿಳಿಸಲು ತಕ್ಷಣ ಶ್ವೇತಪತ್ರ ಹೊರಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಮಾರಣಾಂತಿಕವಾಗುತ್ತಿದ್ದು, ಸೋಂಕು ಹರಡುವುದನ್ನು ತಡೆಯಲಿಕ್ಕಾಗದ ರಾಜ್ಯ ಸರ್ಕಾರ ಜನತೆಯ ಮುಂದೆ ಬೆತ್ತಲಾಗುತ್ತಿದೆ. ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ವಿಫಲ ಪ್ರಯತ್ನದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.

ಕೊರೊನಾ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ,‌ ಖಾಸಗಿ ಆಸ್ಪತ್ರೆಗಳ ದುಬಾರಿ ಶುಲ್ಕ ತೆರುವ ಶಕ್ತಿ ಜನರಿಗೆ ಇಲ್ಲ. ಆಮ್ಲಜನಕದ ದಾಸ್ತಾನಿಲ್ಲ,‌ ರೆಮಿಡಿಸಿವಿರ್ ನಂತಹ ಜೀವರಕ್ಷಕ ಔಷಧಿಯ‌ ಕೊರತೆ ಇದೆ. ಈ ನಡುವೆ ಮುಖ್ಯಮಂತ್ರಿ ಆಸ್ಪತ್ರೆಯಲ್ಲಿದ್ದಾರೆ,‌ ರಾಜ್ಯ ಸರ್ಕಾರ ಐ.ಸಿ.ಯು ನಲ್ಲಿದೆ ಎಂದು ವ್ಯಂಗ್ರಯವಾಡಿದ್ದಾರೆ.

ವರ್ಷದ ಹಿಂದೆ ಮೊದಲ ಬಾರಿ‌ ಕೊರೊನಾ ದಾಳಿ ಇಟ್ಟಾಗ ಅದು ಅನಿರೀಕ್ಷಿತ ಆಘಾತ. ಒಂದು ವರ್ಷದ ಅನುಭವದಿಂದ ರಾಜ್ಯ ಸರ್ಕಾರ ಕೊರೊನಾ ಎದುರಿಸಲು ತನ್ನನ್ನು ಇನ್ನಷ್ಟು ಸಜ್ಜುಗೊಳಿಸಬೇಕಾಗಿತ್ತು. ಕೊರೊನಾವನ್ನೂ‌ ತನ್ನ ಭ್ರಷ್ಟತೆಗೆ ಬಳಸಿಕೊಂಡ ಸರ್ಕಾರ ಈಗ ಕೈಚೆಲ್ಲಿ ಕೂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರೇ ಬಹಿರಂಗವಾಗಿ ಉಲ್ಲಂಘಿಸುತ್ತಿದ್ದಾರೆ. ಸಿಎಂ ಅವರಿಗೆ ಸಚಿವರ ಮೇಲಾಗಲಿ, ಶಾಸಕರ ಮೇಲಾಗಲಿ ನಿಯಂತ್ರಣವೇ ಇಲ್ಲದೆ ನಿರ್ಮಾಣಗೊಂಡಿರುವ‌ ಅರಾಜಕತೆಯೇ ಇಂದಿನ ದುಸ್ಥಿತಿಗೆ ಕಾರಣ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...