Vijayapatha – ವಿಜಯಪಥ
Saturday, November 2, 2024
NEWSರಾಜಕೀಯ

ಉದ್ಯೋಗ ಕಳೆದುಕೊಂಡವರಿಗೆ ಮೊದಲಿಗೆ 10 ಸಾವಿರ ರೂ. ಪರಿಹಾರ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಸೋಮವಾರದಿಂದ (ಮೇ.10) ಕಠಿಣ ಕ್ರಮಗಳನ್ನು ಜಾರಿಗೆ ತರುವುದಾಗಿ ರಾಜ್ಯ ಸರ್ಕಾರ ಘೋಷಿಸಿದ್ದು, ಈಗಾಗಲೇ ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ದುಡಿಯುವ ವರ್ಗಕ್ಕೆ ನೆರವಾಗಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ 6ಪುಟಗಳ ಪತ್ರ ಬರೆದಿದ್ದು ಪ್ರತಿ ಬಿಪಿಎಲ್ ಕುಟುಂಬಕ್ಕೆ ಮೊದಲಿಗೆ 10,000 ರೂ. ನೀಡಬೇಕು. ನಂತರ ತಿಂಗಳಿಗೆ ಆರು ಸಾವಿರ ನೀಡಬೇಕು. ರಾಜ್ಯದ ರೈತರಿಗೆ, ಕುಶಲಕರ್ಮಿ ಸಮುದಾಯಗಳಿಗೆ, ಕಾರ್ಮಿಕರಿಗೆ, ಚಾಲಕರು ಮತ್ತಿತರ ಎಲ್ಲಾ ದುಡಿಯುವ ವರ್ಗಗಳಿಗೆ 10,000 ರೂ. ನೀಡಬೇಕು. ಸಣ್ಣ, ಅತಿ ಸಣ್ಣ, ಸೂಕ್ಷ್ಮ ಗೃಹ ಕೈಗಾರಿಕೆಗಳಿಗೆ ವಾಹನಗಳ ಮಾಲೀಕರ ಸಭೆಗಳನ್ನು ನಡೆಸಿ ಸೂಕ್ತ ಪ್ಯಾಕೇಜ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಸದ್ಯ ಬೇಡಿಕೆ ಇರುವುದಕ್ಕಿಂತ ಹೆಚ್ಚಿನ ಆಮ್ಲಜನಕ ಉತ್ಪಾದನೆಯಾಗುತ್ತಿದೆ. ನಮ್ಮಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ಇಲ್ಲಿಯೇ ಉಳಿಸಿಕೊಳ್ಳಬೇಕು. ಜಿಲ್ಲವಾರು ಘಟಕವನ್ನು ಸ್ಥಾಪಿಸಬೇಕು. ಆಮ್ಲಜನಕಗಳು ಕಾಳಸಂತೆಯಲ್ಲಿ ಮಾರಾಟ ವಾಗುತ್ತಿರುವುದನ್ನು ನಿಲ್ಲಿಸಿ, ಮನೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೂ ಸುಲಭವಾಗಿ ಆಮ್ಲಜನಕ ಸಿಗುವಂತೆ ಮಾಡಬೇಕು ಎಂದು ತಿಳಿಸಿದ್ದಾರೆ.

ಆಮ್ಲಜನಕ ಉತ್ಪಾದನೆಯಾಗುತ್ತಿರುವ ಪ್ರದೇಶಗಳಲ್ಲಿ ಆಮ್ಲಜನಕ ಲಭ್ಯತೆ ಆಧಾರದ ಮೇಲೆ ತಾತ್ಕಾಲಿಕವಾಗಿ ಆಸ್ಪತ್ರೆ ಸ್ಥಾಪಿಸಬೇಕು ಜಿಲ್ಲಾವಾರು ಚಿಕಿತ್ಸೆಯೆಂಬ ವೈಜ್ಞಾನಿಕ ವಿಧಾನವನ್ನು ಕೈಬಿಟ್ಟು ಸುತ್ತಮುತ್ತಲ ಏಳೆಂಟು ಜಿಲ್ಲೆಗಳ ರೋಗಿಗಳನ್ನು ಒಂದು ಕಡೆ ತಂದು ಆಮ್ಲಜನಕ ನೀಡಿ ರಕ್ಷಿಸಬೇಕು. ಇದರಿಂದ ಒತ್ತಡ ಕಡಿಮೆಯಾಗುತ್ತದೆ. ಇನ್ನು ಜೀವರಕ್ಷಕ ಔಷಧಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಪ್ರತಿ ರೋಗಿಗೆ ಕನಿಷ್ಠ ಮಟ್ಟದ ಹಣವನ್ನು ನಿಗದಿಪಡಿಸಲಾಗಿದೆ. ಅದರಿಂದ ಸಮರ್ಪಕವಾಗಿ ರೆಮಿಡಿಸಿವರ್‌ ಔಷಧಗಳನ್ನು ನೀಡಲಾಗುತ್ತಿಲ್ಲ ಎಂಬ ಮಾಹಿತಿ ಇದೆ. ಈ ಅವ್ಯವಸ್ಥೆಯನ್ನು ಸರಿ ಮಾಡಬೇಕು. ಹಾಸಿಗೆಗಳು ಎಷ್ಟು ಬೇಕಾಗಬಹುದು ಎಂಬುದನ್ನು ಮೊದಲೇ ಅಂದಾಜಿಸಿ ಕಾರ್ಯೋನ್ಮುಖರಾಗಬೇಕು. ವೈದ್ಯರುಗಳಿಗೆ ಸಂಬಂಧಿಸಿದಂತೆ ಖಾಸಗಿ, ನಿವೃತ್ತರನ್ನು ಅಗತ್ಯವಿದ್ದರೆ ನೇಮಿಸಿಕೊಳ್ಳಬೇಕು. ದಾದಿಯರ ವಿಷಯದಲ್ಲೂ ಹಾಗೆ ಮಾಡಬೇಕು. ಅಂತಿಮ ವರ್ಷದಲ್ಲಿರುವ ವೈದ್ಯ ವಿದ್ಯಾರ್ಥಿಗಳನ್ನು ಚಿಕಿತ್ಸೆಗೆ ನಿಯೋಜಿಸಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಲಸಿಕೆ ಹಾಕಿಸಿ ಕೊಳ್ಳುವವರಿಗೆ ಆದ್ಯತೆಯ ಮೇಲೆ ಲಸಿಕೆ ಹಾಕಬೇಕು. ಕಳೆದ ವರ್ಷ ತರಿಸಿದ ಸಾವಿರಗಟ್ಟಲೆ ವೆಂಟಿಲೆಟರ್ ಗಳನ್ನು ಬಳಸದೆ ಗೋದಾಮುಗಳಲ್ಲಿ ಧೂಳುತಿನ್ನಲು ಬಿಡಲಾಗಿದೆ ಎಂಬ ಮಾಹಿತಿ ಇದೆ, ಇದನ್ನು ಕ್ರಿಮಿನಲ್ ಎನ್ನಬೇಕಾಗುತ್ತದೆ ಎಂದಿದ್ದಾರೆ.

ಅಗತ್ಯವಿದ್ದರೆ ಕಲ್ಯಾಣಮಂಟಪ ಕ್ರೀಡಾಂಗಣ ಹಾಸ್ಟೆಲ್‌ಗಳು ಮುಂತಾದವುಗಳನ್ನು ತಾತ್ಕಾಲಿಕ ಆಸ್ಪತ್ರೆ ಮಾಡಿ ಸೇವೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.

ಇನ್ನು ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲೂ ಖಾಲಿ ಜಾಗವನ್ನು ಹುಡುಕಿ ವ್ಯವಸ್ಥಿತವಾಗಿ ಅಂತ್ಯಕ್ರಿಯೆ ನಡೆಸಬೇಕು. ಸಂಕಷ್ಟದಲ್ಲಿರುವವರಿಗೆ ನೆರವಾಗಬೇಕು. ಈಗಾಗಲೇ ಸಾವಿರಾರು ಜನ ಉದ್ಯೋಗಗಳನ್ನು ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಸರ್ಕಾರ ಪ್ರತಿಯೊಬ್ಬರಿಗೂ ತಿಂಗಳಿಗೆ ತಲಾ 10 ಕೆಜಿ ಅಕ್ಕಿ ನೀಡಬೇಕು ಜೊತೆಗೆ ಬೇಳೆ, ಅಡುಗೆ ಎಣ್ಣೆ ಮುಂತಾದ ದಿನಸಿ ಪದಾರ್ಥಗಳು ಇರುವ ಕೀಟಗಳನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ನಗರಗಳಿಂದ ಹಳ್ಳಿಗಳಿಗೆ ದುಡಿಯುವ ಜನ ವಾಪಸಾಗುತ್ತಿದ್ದಾರೆ. ಈ ಸಂದರ್ಭಗಳಲ್ಲಿ ಉದ್ಯೋಗಖಾತ್ರಿ ಯೋಜನೆಯನ್ನು ಅತ್ಯಂತ ಸಮರ್ಪಕವಾಗಿ ಬಳಸಬೇಕು. ಕನಿಷ್ಠ 200 ಮಾನವ ದಿನಗಳ ಯೋಜನೆಯನ್ನು ಜಾರಿಗೊಳಿಸಬೇಕು. ಅಗತ್ಯ ಇರುವ ಕಡೆ ಬೇಡಿಕೆಯನ್ನು ಆಧರಿಸಿ ಉದ್ಯೋಗ ನೀಡಬೇಕು. ಪ್ರಸ್ತುತ ಇರುವ ಹಣದುಬ್ಬರವನ್ನು ಆಧರಿಸಿ ನರೇಗಾ ಕೂಲಿ ಪರಿಷ್ಕರಿಸಬೇಕು ಮತ್ತು ಹೆಚ್ಚಿಸಬೇಕು. ನರೇಗಾ ಯೋಜನೆಯಲ್ಲಿ ಕೆಲಸ ಮಾಡಿದವರಿಗೆ ನಾಲ್ಕು ತಿಂಗಳಿಂದ ಕೂಲಿ ಹಣ ಬಿಡುಗಡೆ ಮಾಡಿಲ್ಲ. ಈ ಬಾಕಿ ಉಳಿಸಿಕೊಂಡಿರುವ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ