NEWSರಾಜಕೀಯ

ಕೊರೊನಾ ಲಸಿಕೆ ಲಭ್ಯವಾದ ತಕ್ಷಣ ವಿತರಣೆ ಕುರಿತು ಮುಂದಿನವಾರ ಉನ್ನತ ಸಭೆ : ಸಚಿವ ಸುಧಾಕರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಲಸಿಕೆ ಲಭ್ಯವಾಗುತ್ತಿದ್ದಂತೆಯೇ ವಿತರಣೆಯ ಸಿದ್ಧತೆಗಳ ಕುರಿತು ಮುಂದಿನ ವಾರ ಉನ್ನತ ಮಟ್ಟದ ಸಭೆ ಕರೆಯಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡುವ ಕುರಿತು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ. ರಾಜ್ಯ ಆರೋಗ್ಯ ವ್ಯವಸ್ಥೆ ವಿಶಾಲವಾದ ಸಂಪರ್ಕಗಳನ್ನು ಹೊಂದಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಅಂಗನವಾಡಿಗಳ ಮೂಲಕ ಲಸಿಕೆ ಲಭ್ಯವಾಗುತ್ತಿದ್ದಂತೆಯೇ ಪ್ರತೀ ನಾಗರಿಕನಿಗೂ ಲಭ್ಯವಾಗುವಂತೆ ಮಾಡಲಾಗುತ್ತದೆ. ರಾಜ್ಯದಲ್ಲಿ ಲಸಿಕೆ ವಿತರಣೆ ಮಾಡುವ ಕುರಿತು ಸಿದ್ಥತೆಗಳನ್ನು ನಡೆಸಲು ಸಭೆ ಕರೆಯಲಾಗಿದೆ ಎಂದು ಹೇಳಿದ್ದಾರೆ.

2021ರ ಜನವರಿಯಲ್ಲಿ ಲಸಿಕೆ ಲಭ್ಯವಾಗುವ ನಿರೀಕ್ಷೆಯಿದೆ. ಇದಕ್ಕಾಗಿ ಸರ್ಕಾರ ಸಿದ್ಧತೆಗಳನ್ನೂ ನಡೆಸುತ್ತಿದೆ. ಮಕ್ಕಳಿಗೆ ರೋಗನಿರೋಧಕ ಶಕ್ತಿ ನೀಡುವಲ್ಲಿ ಭಾರತಕ್ಕೆ ಅಪಾರ ಅನುಭವವಿದ್ದರೂ, ಕೆಲವು ಪಾಶ್ಚಿಮಾತ್ಯ ದೇಶಗಳಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಲಸಿಕೆಗಳ ಬಗ್ಗೆ ನಮಗೆ ಅನುಭವವಿಲ್ಲ ಎಂಬುದೇ ದೊಡ್ಡ ಸವಾಲಾಗಿದೆ. ಲಸಿಕೆ ಸಿದ್ಧವಾದ ನಂತರ ಅವುಗಳನ್ನು ವಿತರಿಸುವ ಕಾರ್ಯವನ್ನು ಕೇಂದ್ರ ಸರ್ಕಾರ ನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಆರೋಗ್ಯ ಆಯುಕ್ತ ಪಂಕಜ್ ಪಾಂಡೆ ಮಾತನಾಡಿ, ಲಸಿಕೆಯು ಇನ್ನೂ ಪ್ರಯೋಗದ ಹಂತದಲ್ಲಿಯೇ ಇದೆ. ಭಾರತ ಸರ್ಕಾರವು ಲಸಿಕೆಯ ಪ್ರಕ್ರಿಯೆಗಳನ್ನು ನಡೆಸುತ್ತಿದ್ದು, ಲಸಿಕೆ ಬಂದ ಕೂಡಲೇ ಬೆಲೆ ಸೇರಿ ಕೆಲವು ನೀತಿ ವಿಷಯಗಳ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್...