ಬೆಂಗಳೂರು: ರಾಜ್ಯದಲ್ಲಿ ಒಬ್ಬರು ಮೃತಪಟ್ಟಿದ್ದು ಈ ಮೂಲಕ ಇದುವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಜತೆಗೆ ಇಂದು 54 ಹೊಸ ಕೊರೊನಾ ಪಾಲಿಸಿಟಿವ್ ಬಂದಿದ್ದು, ಕೋವಿಡ್-19 ಸೋಂಕಿತರ ಸಂಖ್ಯೆ 848ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 56 ವರ್ಷದ ಮಹಿಳೆ ಮೃತವಾಗಿದ್ದು, ಆಕೆ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯನ್ನು ಸೀಜ್ ಮಾಡಿದ್ದು ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇನ್ನು ಭಾನುವಾರ ಅತಿ ಹೆಚ್ಚು ಸೋಂಕಿತರು ಪತ್ತೆಯಾಗಿರುವ ಜಿಲ್ಲೆ ಬೆಳಗಾವಿಯಲ್ಲಿ 22, ಶಿವಮೊಗ್ಗ, ಬಾಗಲಕೋಟೆಯಲ್ಲಿ ತಲಾ 8, ಉತ್ತರ ಕನ್ನಡದಲ್ಲಿ ಏಳು, ಬೆಂಗಳೂರಿನಲ್ಲಿ ಮೂರು, ಕಲಬುರಗಿಯಲ್ಲಿ ನಾಲ್ಕು, ದಾವಣಗೆರೆ ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ ಒಂದು ಕೊರೊನಾ ಸೋಂಕು ಪತ್ತೆಯಾಗಿದೆ.
ರಾಜ್ಯದಲ್ಲಿ 31 ಜನರು ಮೃತಪಟ್ಟಿದ್ದು, 422 ಜನರು ರೋಗದಿಂದ ಮುಕ್ತಗೊಂಡು ಮನೆಗೆ ಮರಳಿದ್ದಾರೆ. ಇನ್ನು 395 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ 31 ಮಂದಿ ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಯಾವುದೇ ಪಾಸಿಟಿವ್ಪ್ರಕರಣ ವರದಿಯಾಗಿಲ್ಲ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ದೇಶದಲ್ಲಿ 65,021 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 65,021 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 2,153 ಮಂದಿ ಮೃತಪಟ್ಟಿದ್ದಾರೆ.19665 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 41,42,107 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,81,669 ಜನರು ಮೃತಪಟ್ಟಿದ್ದಾರೆ. 14,58,191 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail