Please assign a menu to the primary menu location under menu

NEWSನಮ್ಮರಾಜ್ಯ

ಮೇ7- ಸಂಜೆ ವೇಳೆಗೆ ರಾಜ್ಯದಲ್ಲಿ 12 ಹೊಸ ಕೊರೊನಾ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಒಬ್ಬರು ಮೃತಪಟ್ಟಿದ್ದು ಈ ಮೂಲಕ ಇದುವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಜತೆಗೆ ಇಂದು ಬೆಳಗ್ಗೆ 8 ಹೊಸ ಕೊರೊನಾ ಪಾಲಿಸಿಟಿವ್‌ ಇದ್ದದ್ದು ಸಂಜೆ  ವೇಳೆಗೆ 4 ಪ್ರಕರಣ ಕಾಣಿಸಿಕೊಂಡು ಒಟ್ಟು ಒಂದು 12 ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಕೋವಿಡ್‌-19 ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದೆ.

ದಾವಣಗೆರೆಯಲ್ಲಿ ರೋಗಿ ಸಂಖ್ಯೆ 694ರ 55 ವರ್ಷದ ಕೊರೊನಾ ಸೋಂಕಿತ ಮಹಿಳೆ ಮೃತಪಟ್ಟಿದ್ದು ಈ ಮೂಲಕ ರಾಜ್ಯದಲ್ಲಿ 30 ಜನರು ಮೃತಪಟ್ಟಿದ್ದು, 366 ಜನರು ರೋಗದಿಂದ ಮುಕ್ತಗೊಂಡು ಮನೆಗೆ ಮರಳಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಇನ್ನು ದಾವಣಗೆರೆಯಲ್ಲಿ 4, ಬಾಗಲಕೋಟೆಯ ಬಾದಾಮಿ ಮತ್ತು ಕಲಬುರಗಿಯಲ್ಲಿ ತಲಾ ಮೂರು ಸೋಂಕಿತರು ಹಾಗೂ ಬೆಳಗಾವಿಯ ಹಿರೇಬಾಗೇವಾಡಿ, ಬೆಂಗಳೂರಿನಲ್ಲಿ ತಲಾ ಒಂದು ಪಾಸಿಟಿವ್‌ ಪ್ರಕರಣ ಪತ್ತೆಯಾಗಿದೆ.  ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ 705 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

ಇನ್ನು 308  ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ 30 ಮಂದಿ ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಯಾವುದೇ ಪಾಸಿಟಿವ್‌ಪ್ರಕರಣ ವರದಿಯಾಗಿಲ್ಲ.

ದೇಶದಲ್ಲಿ 53,049 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 53,049 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 1,787 ಮಂದಿ ಮೃತಪಟ್ಟಿದ್ದಾರೆ. 15,331 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 38,46,533 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,65,882 ಜನರು ಮೃತಪಟ್ಟಿದ್ದಾರೆ. 13,15,718 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply

error: Content is protected !!
LATEST
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG KSRTC ಕುಣಿಗಲ್‌: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ