NEWSನಮ್ಮರಾಜ್ಯ

ಕೊರೊನಾ ಸಂಕಷ್ಟ: ಸ್ವಪಕ್ಷ ಬಿಜೆಪಿ ನಾಯಕರು, ಸರ್ಕಾರದ ವಿರುದ್ಧವೇ ವಿಶ್ವನಾಥ್‌ ವಾಗ್ದಾಳಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಚಾಮರಾಜನಗರದಲ್ಲಿ ಸಂಭವಿಸಿದ ಆಕ್ಸಿಜನ್ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ.

ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆಡಳಿತರೂಢ ಸ್ವಪಕ್ಷದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರಿಹಾರವನ್ನು ಘೋಷಿಸುವ ಮೂಲಕ ಮುಖ್ಯಮಂತ್ರಿ ಯಡಿಯುರಪ್ಪ ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಬಹುದಿತ್ತು. ಕೂಡಲೇ ಸರ್ಕಾರ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಬೇಕು. ಎಲ್ಲಾ ಪಿಡ‌ಬ್ಲ್ಯುಡಿ ಕೆಲಸ ನಿಲ್ಲಿಸಿ, ಪರಿಹಾರಕ್ಕೆ ಹಣ ನೀಡಬೇಕೆಂದು ಒತ್ತಾಯಿಸಿದರು.

ಇದೇ ವೇಳೆ ನ್ಯಾಯಾಧೀಶರು ಸರ್ವಜ್ಞರಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಕೇಂದ್ರ ಸಚಿವ ಸದಾನಂದ ಗೌಡ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ವಾಗ್ದಾಳಿ ನಡೆಸಿದರು.

ಸದಾನಂದಗೌಡ ಕೇಂದ್ರ ಸಚಿವರಾಗಿರುವವರು. ಸಿ.ಟಿ.ರವಿ ಸಚಿವರಾಗಿದ್ದವರು. ಇವರೆ ಸರ್ಕಾರ. ಸರ್ಕಾರದ ಭಾಗವಾಗಿದ್ದ ಇವರು ಈ ರೀತಿಯ ಮಾತುಗಳನ್ನಾಡುವುದು ಸಮಂಜಸವಲ್ಲ. ಸದಾನಂದಗೌಡರು ನೇಣು ಹಾಕಿಕೊಳ್ಳಲಾ ಎಂದರೆ ಸರ್ಕಾರವೇ ನೇಣು ಹಾಕಿಕೋಳ್ಳುತ್ತಾ? ಈ ದೇಶದಲ್ಲಿ ಕಾನೂನು ಇದೆ. ನಾಯಕರಿಂದಲೆ ಈ ರೀತಿಯ ವರ್ತನೆ ಸೂಕ್ತವಲ್ಲ ಎಂದು ಕಿಡಿಕಾರಿದರು.

ಇನ್ನು ನಾವು ಜಡ್ಜ್‌ಗಳನ್ನು ಸರ್ವಜ್ಞರು ಎಂದೇ ನೋಡುತ್ತೇವೆ. ಕೇಂದ್ರಕ್ಕೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಹೈಕೋರ್ಟ್‌ಗಳೆ ಸೂಚನೆ ಕೊಡುತ್ತಿವೆ. ಚಾಮರಾಜನಗರ ಘಟನೆಯಲ್ಲಿ ಹೈಕೋರ್ಟ್ ಮಧ್ಯ ಪ್ರವೇಶ ಮಾಡಿದ್ದರಿಂದಲೇ ಮೈಸೂರಿನ ಗೌರವಕ್ಕೆ ಯಾವುದೇ ಧಕ್ಕೆ ಬರಲಿಲ್ಲ ಎಂದು ವಿಶ್ವನಾಥ್ ಹೇಳಿದರು.

ಅಧಿಕಾರಿಗಳೇ ಆಗಿದ್ದರೆ ಚಾಮರಾಜನಗರದ ಆಕ್ಸಿಜನ್ ದುರಂತದಲ್ಲಿ ಸತ್ತವರು ಮೂರೇ ಜನ. ಇದಕ್ಕೆ ಮೈಸೂರು ಜಿಲ್ಲಾಧಿಕಾರಿಯೇ ಕಾರಣ ಎಂದು ವರದಿ ನೀಡುತ್ತಿದ್ದರು. ಆದರೆ ನ್ಯಾಯಾಂಗ ಯಾವತ್ತೂ ನ್ಯಾಯದ ಪರವಾಗಿಯೇ ಇರುತ್ತದೆ. ಹಾಗಾಗಿ ನ್ಯಾಯಾಂಗ ವ್ಯವಸ್ಥೆಗೆ ನನ್ನ ಧನ್ಯವಾದ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ