NEWSಶಿಕ್ಷಣ-

25 ಶಿಕ್ಷಕರಲ್ಲಿ ಕೊರೊನಾ ಸೋಂಕು ದೃಢ: ಆತಂಕ ಬೇಡ ಶಾಲೆಗೆ ಮಕ್ಕಳ ಕಳುಹಿಸಿ ಎಂದ ಸಚಿವ ಸುಧಾಕರ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಆತಂಕದ ನಡುವೆಯೂ ರಾಜ್ಯ ಸರ್ಕಾರ ಜನವರಿ 1 ರಿಂದ ಶಾಲಾ ಕಾಲೇಜುಗಳ ಆರಂಭಕ್ಕೆ ಗ್ರೀನ್​ ಸಿಗ್ನಲ್​ ನೀಡಿದೆ. ಪರಿಣಾಮ 10 ತಿಂಗಳ ನಂತರ ಶಾಲಾ ಕಾಲೇಜುಗಳು ಎಂದಿನಂತೆ ಆರಂಭವಾಗಿವೆ. ಆದರೆ, ದುರಾದೃಷ್ಟವಶಾತ್​ 25 ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿರುವುದು ಇದೀಗ ದೃಢಪಟ್ಟಿದ್ದು, ಮಕ್ಕಳು ಮತ್ತು ಪಾಲಕರಲ್ಲಿ ಆತಂಕ ಮನೆ ಮಾಡಿದೆ.

ಶಾಲೆ ಆರಂಭವಾಯಿತು ಎಂದು ಮಕ್ಕಳೂ ಸಹ ಉತ್ಸಾಹದಿಂದಲೇ ಶಾಲೆಗೆ ತೆರಳಿದ್ದು, ಶಿಕ್ಷಕರು ಮಕ್ಕಳನ್ನು ಸಂತೋಷದಿಂದಲೇ ಬರಮಾಡಿಕೊಂಡಿದ್ದಾರೆ. ಆದರೆ ಶಿಕ್ಷಕರನ್ನು ಬಾಧಿಸಿರುವ ಕೊರೊನಾದಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಈ ಶೈಕ್ಷಣಿಕ ವರ್ಷದಲ್ಲಿ ಶಾಲಾ ದಾಖಲಾತಿ ಕಡಿಮೆಯಾಗುವ ಆತಂಕ ಎದುರಾಗಿದೆ.

ಈ ನಡುವೆ ಕೊರೊನಾಗೆ ಯಾರೂ ಹೆದರುವ ಅಗತ್ಯವಿಲ್ಲ. ಪೋಷಕರು ಧೈರ್ಯದಿಂದ ಮಕ್ಕಳನ್ನು ಶಾಲೆಗೆ ಕಳುಹಿಸಿ. ಸರ್ಕಾರ ಅಗತ್ಯ ಕ್ರಮಗಳನ್ನೂ ಜರುಗಿಸಲಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಭರವಸೆ ನೀಡಿದ್ದಾರೆ.

25 ಶಿಕ್ಷಕರಿಗೆ ಸೋಂಕು ಧೃಡಪಟ್ಟಿರುವುದು ಅಧಿಕೃತ ಅಲ್ಲ. ಅಲ್ಲದೆ, ಲಕ್ಷದ ಮುಂದೆ 25 ಪ್ರಕರಣಗಳು ದೊಡ್ಡ ವಿಚಾರವಲ್ಲ. ಹೀಗಾಗಿ ಯಾರೂ ಹೆದರುವ ಅಗತ್ಯ ಇಲ್ಲ. ಶಾಲೆ ಮಕ್ಕಳಿಗೆ ಮತ್ತು ಶಿಕ್ಷಕರಿಗೆ ಎಷ್ಟು ಸಂಖ್ಯೆಯಲ್ಲಿ ಪಾಸಿಟಿವ್ ಬಂದಿದೆ ಎಂಬ ನಿಖರ ಮಾಹಿತಿ‌ ಇಲ್ಲ. ಇದರ ಬಗ್ಗೆ ಸರಿಯಾದ ಮಾಹಿತಿ ಪಡೆದು ನಂತರ ಧೃಡಪಡಿಸುತ್ತೇನೆ. ಶಾಲೆಗಳು ಸುಸೂತ್ರವಾಗಿ ನಡೆಯುತ್ತಿವೆ. ಇದಕ್ಕೆ ಎಲ್ಲರ ಸಹಕಾರ ಬೇಕಿದೆ. ಸರ್ಕಾರ ಈ ವಿಚಾರದಲ್ಲಿ ಎಚ್ಚೆತ್ತುಕೊಂಡಿದೆ. ಯಾರಿಗಾದರೂ ಪಾಸಿಟಿವ್ ಬಂದರೆ ಚಿಕಿತ್ಸೆ ನೀಡಲಾಗುವುದು ಎಂದು ಸುಧಾಕರ್​ ತಿಳಿಸಿದ್ದಾರೆ.

ಇನ್ನೂ ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಆದರೆ, ಕರ್ನಾಟಕದಲ್ಲಿ ಈವರೆಗೆ ಯಾವ ಪ್ರಕರಣಗಳೂ ಪತ್ತೆಯಾಗಿಲ್ಲ. ಆದರೆ, ಜಿಲ್ಲಾವಾರು ಎಚ್ಚರಿಕೆ ವಹಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ