ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ತನ್ನ ಅಟ್ಟಹಾಸ ಮುಂದುವರಿಸಿದೆ. ಇಂದು 8,244 ಮಂದಿ ಕೊರೊನಾಗೆ ಒಳಗಾಗಿದ್ದಾರೆ. 119 ಮಂದಿ ಬಲಿಯಾಗಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,67,689ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 119 ಮಂದಿ ಮೃತಪಟ್ಟಿದ್ದು ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7,403ಕ್ಕೆ (ಅನ್ಯಕಾರಣದಿಂದ 19 ಮಂದಿ ಮೃತರು ಸೇರಿ) ಏರಿಕೆಯಾಗಿದೆ.
ಕೊರೊನಾದಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 37 ಸೋಂಕಿತರು ಸೇರಿ ರಾಜ್ಯದಲ್ಲಿ ಒಟ್ಟು 119 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಅಂದರೆ 2,966 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯಲ್ಲಿ ಸೋಂಕಿತರ ಸಂಖ್ಯೆ 1,73,628ಕ್ಕೆ ಏರಿಕೆಯಾಗಿದೆ.
ಇಂದು 8,865 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,61,823ಕ್ಕೆ ಏರಿಕೆಯಾಗಿದೆ. 98,463 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 800 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದಿನ 14/09/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @MoHFW_INDIA @UNDP_India @WHOSEARO @UNICEFIndia @sriramulubjp @drashwathcn @BSBommaihttps://t.co/NvOANHtI1M pic.twitter.com/tE7tRUmPB4
— K'taka Health Dept (@DHFWKA) September 14, 2020