ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದು, ದಾಖಲೆಯ 8642 ಪ್ರಕರಣ ಪತ್ತೆಯಾಗಿದ್ದು 126ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ 8642 ಕೊರೊನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,49,590ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,343ಕ್ಕೆ (ಅನ್ಯ ಕಾರಣಕ್ಕೆ 16ಸೇರಿ) ಏರಿಕೆಯಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಹೆಚ್ಚಾಗಿದ್ದು ಇಂದು 7,201 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 2,4590 ಕೊರೊನಾ ಸೋಂಕಿತರಲ್ಲಿ 1,64,150 ಮಂದಿ ಗುಣಮುಖರಾಗಿದ್ದು ಇನ್ನು 81,097 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 2,804 ಮಂದಿ ಕೊರೊನಾಗೆ ಒಳಗಾಗಿದ್ದು, ಸೋಂಕಿತರ ಸಂಖ್ಯೆ 96,910ಕ್ಕೆ ಏರಿಕೆಯಾಗಿದೆ. ಇಂದು 56 ಮಂದಿ ಮೃತಪಟ್ಟಿದ್ದು ಒಟ್ಟಾರೆ ಸಾವಿನ ಸಂಖ್ಯೆ 1,588 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 33,280 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ತಿಳಿಸಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇಂದಿನ 19/08/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @sriramulubjp @drashwathcn @BSBommai @mla_sudhakar @iaspankajpandey @Tejasvi_Surya @BBMP_MAYOR @BBMPCOMMhttps://t.co/ciWlHNOjVO pic.twitter.com/nz6kDiB0eT
— K'taka Health Dept (@DHFWKA) August 19, 2020