ಮೈಸೂರು: ಜಿಲ್ಲೆಯಲ್ಲಿ ಇಂದು ಕೊರೊನಾ ಮಹಾಮಾರಿ ತನ್ನ ಆರ್ಭಟವನ್ನು ಮುಂದುವರಿಸಿದ್ದು 309 ಮಂದಿ ಈ ಸೋಂಕಿಗೆ ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಸಾವಿನ ಸಂಖ್ಯೆಯಲ್ಲೂ ಏರಿಕೆ ಕಾಣುತ್ತಿದ್ದು ಇಂದು 11 ಮಂದಿ ಮೃತಪಟ್ಟಿದ್ದಾರೆ.
ಒಟ್ಟಾರೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 16,810ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 427ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ 546 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇದರೊಂದಿಗೆ ಈವರೆಗೆ 12,130 ಮಂದಿ ಗುಣಮುಖರಾಗಿದ್ದಾರೆ. ಇನ್ನು 4,253 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ತಿಳಿಸಿದೆ.