ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದ ಇಂದು ದಾಖಲೆಯ 7040 ಪ್ರಕರಣ ಪತ್ತೆಯಾಗಿದ್ದು 124 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ 7040 ಕೊರೊನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 226966 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 3,953ಕ್ಕೆ (ಅನ್ಯ ಕಾರಣಕ್ಕೆ 16ಸೇರಿ) ಏರಿಕೆಯಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಹೆಚ್ಚಾಗಿದ್ದು ಇಂದು 6680 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 226966 ಕೊರೊನಾ ಸೋಂಕಿತರಲ್ಲಿ 141491 ಮಂದಿ ಗುಣಮುಖರಾಗಿದ್ದು ಇನ್ನು 81512 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 2131 ಮಂದಿ ಕೊರೊನಾಗೆ ಒಳಗಾಗಿದ್ದು, ಸೋಂಕಿತರ ಸಂಖ್ಯೆ 89811ಕ್ಕೆ ಏರಿಕೆಯಾಗಿದೆ. ಇಂದು 49 ಮಂದಿ ಮೃತಪಟ್ಟಿದ್ದು ಒಟ್ಟಾರೆ ಸಾವಿನ ಸಂಖ್ಯೆ 1444ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 34584 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ತಿಳಿಸಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇಂದಿನ 16/08/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @sriramulubjp @drashwathcn @BSBommai @mla_sudhakar @iaspankajpandey @Tejasvi_Surya @BBMP_MAYOR @BBMPCOMMhttps://t.co/TM60CIKihR pic.twitter.com/sn7l8oLnLM
— K'taka Health Dept (@DHFWKA) August 16, 2020