NEWSನಮ್ಮಜಿಲ್ಲೆ

ಕೊರೊನಾ ರೋಗಕ್ಕೆ ಮೈಸೂರಿನಲ್ಲಿ 2ನೇ ಹಂತದಲ್ಲಿ ಲಸಿಕೆ ಪ್ರಯೋಗ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೊರೊನಾ ಸೋಂಕು ನಿವಾರಣೆ ಹಿನ್ನೆಲೆಯಲ್ಲಿ ಆಕ್ಸ್‌ಫರ್ಡ್‌ ಸಂಶೋಧಿಸಿರುವ ‘ಕೋವಿಶೀಲ್ಡ್‌’ ಲಸಿಕೆಯ ಎರಡನೇ ಹಂತದ ಪ್ರಯೋಗ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಆರಂಭವಾಗಿದ್ದು, ಐವರು ಸ್ವಯಂ ಸೇವಕರಿಗೆ ಲಸಿಕೆ ಹಾಕಲಾಗಿದೆ.

ಸದ್ಯ ಲಸಿಕೆ ಪಡೆದ ನಂತರ ಆ ಐವರಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿಲ್ಲ ಮತ್ತು ರಿಯಾಕ್ಷನ್ ಸಹ ಆಗಿಲ್ಲ. ಹೀಗಾಗಿ ಲಸಿಕೆ ಮತ್ತೊಂದು ಹಂತದ ಸಕ್ಸಸ್ ಕಂಡಿದೆ ಎನ್ನಬಹದು.

ಕೊರೊನಾಗೆ ಕಂಡು ಹಿಡಿದ ಲಸಿಕೆಯ ಮೊದಲ ಮಾನವ ಪ್ರಯೋಗ ಮೈಸೂರಿನಲ್ಲಿ ನಡೆಯುತ್ತಿದೆ. ಮೈಸೂರಿನ ಜೆಎಸ್ ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಲಸಿಕೆ  ಪ್ರಯೋಗ ಮಾಡಲಾಗುತ್ತಿದ್ದು ಡಿಸೆಂಬರ್ ಅಂತ್ಯಕ್ಕೆ ಪ್ರಯೋಗದ ಫಲಿತಾಂಶ ಬರಲಿದೆ ಎಂದು  ಜೆ ಎಸ್ ಎಸ್ ಅಕಾಡೆಮಿಕ್  ಸಮಕುಲಾಧಿಪತಿ ಬಿ. ಸುರೇಶ್ ಸುದ್ದಿಗಾರರಿಗೆ ತಿಳಿಸಿದರು.

ಪುಣೆಯ ಸೆರಂ ಇನ್ ಸ್ಟಿಟ್ಯೂಟ್ ನಿಂದ ಈ ಲಸಿಕೆ ಬಂದಿದ್ದು  ನೋಂದಾಯಿತ ಸ್ವಯಂ ಸೇವಕರ ಮೇಲೆ ಮೊದಲ ಪ್ರಯೋಗ ನಡೆಸಲಾಗುತ್ತದೆ. ಒಟ್ಟಾರೇ 250 ಜನರ ಮೇಲೆ  ಆಕ್ಸ್ ಫರ್ಡ್ ಕೋವಿಶೀಲ್ಡ್ ಲಸಿಕೆಯನ್ನ  ಪ್ರಯೋಗ ಮಾಡಲಾಗುತ್ತದೆ ಎಂದು ಬಿ. ಸುರೇಶ್ ವಿವರಿಸಿದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ