CrimeNEWSದೇಶ-ವಿದೇಶ

ತಡರಾತ್ರಿ ಆಶ್ರಮಕ್ಕೆ ನುಗ್ಗಿ ಸಾಧ್ವಿಯನ್ನೇ ಗ್ಯಾಂಗ್‌ರೇಪ್ ಮಾಡಿದ ಕಾಮುಕರು

ವಿಜಯಪಥ ಸಮಗ್ರ ಸುದ್ದಿ

ರಾಂಚಿ: ತಡರಾತ್ರಿ ಆಶ್ರಮಕ್ಕೆ ನುಗ್ಗಿದ ನಾಲ್ವರು ಕಾಮುಕರು ಸಾಧುಗಳನ್ನು ರೂಮಿನಲ್ಲಿ ಕೂಡಿ ಹಾಕಿ ಸಾಧ್ವಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಜಾರ್ಖಂಡ್‍ನ ಗೊಡ್ಡಾ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಆಶ್ರಮವೊಂದಕ್ಕೆ ಸೋಮವಾರ ತಡ ರಾತ್ರಿ ನಾಲ್ವರು ಕಾಮುಕರು ಏಕಾಏಕಿ ಬಲವಂತವಾಗಿ ನುಗ್ಗಿದ್ದಾರೆ. ನಂತರ ಆಶ್ರಮದಲ್ಲಿದ್ದ ಸಾಧುಗಳನ್ನು ಒಂದು ರೂಮಿನಲ್ಲಿ ಕೂಡಿ ಹಾಕಿ ಬೀಗ ಹಾಕಿದ್ದಾರೆ.

ನಂತರ  ಆಶ್ರಮದಲ್ಲಿದ್ದ 38 ವರ್ಷದ ಸಾಧ್ವಿ ಮೇಲೆ ಎಲ್ಲರೂ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅವರಲ್ಲಿ ಈಗಾಗಲೇ ಮೂವರನ್ನು ಬಂಧಿಸಿದ್ದು, ಒಬ್ಬ ಕಾಮುಕ ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರವನ್ನು ಸಾಧುವೊಬ್ಬರು ತಡೆಯಲು ಹೋದಾಗ ಅವರನ್ನು ಆರೋಪಿಗಳು ಥಳಿಸಿದ್ದಾರೆ. ಸಂತ್ರಸ್ತೆ ಮಂಗಳವಾರ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

ಸಾಧ್ವಿ ನೀಡಿದ ದೂರಿನ ಅನ್ವಯ ಪೊಲೀಸರು ಎಫ್‍ಐಆರ್ ದಾಖಲಿಸಿದ್ದು, ತಲೆ ಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಬಲೆ ಬೀಸಿರುವುದಾಗಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ