CrimeNEWSನಮ್ಮಜಿಲ್ಲೆ

ದೈಹಿಕ ಸಂಪರ್ಕ ಬೆಳೆಸಲು ಪೀಡಿಸುತ್ತಿದ್ದ ವೈದ್ಯ ವಿದ್ಯಾರ್ಥಿ   

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ವೈದ್ಯಕೀಯ ವಿದ್ಯಾರ್ಥಿಯೊಬ್ಬ  ಯುವತಿಯ ಖಾಸಗಿ ವಿಡಿಯೋ ಇಟ್ಟುಕೊಂಡು ದೈಹಿಕ ಸಂಪರ್ಕ ಬೆಳೆಸಲು ಪೀಡಿಸುತ್ತಿದ್ದರಿಂದ ಭಯಗೊಂಡ   ಸಂತ್ರಸ್ತ ಯುವತಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮೈಸೂರು ಮೂಲದ ವೈದ್ಯಕೀಯ ವಿದ್ಯಾರ್ಥಿ ರಾಬರ್ಟ್ ರೋಷನ್ ಎಂಬುವವನ ವಿರುದ್ಧ ವೈಟ್ ಫೀಲ್ಡ್ ಸೈಬರ್ ಪೊಲೀಸರಿಗೆ ಮಾರತ್‌ಹಳ್ಳಿಯ 20 ವರ್ಷದ ಯುವತಿ ದೂರು ನೀಡಿದ್ದಾರೆ. ಇನ್‌ಸ್ಟಾಗ್ರಾಮ್ ನಲ್ಲಿ ಕೆಲವು ತಿಂಗಳ ಹಿಂದೆ ಪರಿಚಿತನಾಗಿದ್ದ ಆರೋಪಿ ತಾನು ವೈದ್ಯಕೀಯ ವಿದ್ಯಾರ್ಥಿ ಎಂದು ಹೇಳಿಕೊಂಡು ನನ್ನೊಂದಿಗೆ ಚಾಟ್ ಮಾಡುತ್ತಿದ್ದು, ನಂತರದಲ್ಲಿ ಇಬ್ಬರು ಸ್ನೇಹಿತರಾಗಿದ್ದವು.

ಹೀಗಾಗಿ ಮಾರ್ಚ್ ನಲ್ಲಿ ಬೆಂಗಳೂರಿಗೆ ಬಂದಿದ್ದ ಆರೋಪಿ ನನ್ನೊಂದಿಗೆ ಸುತ್ತಾಡಿದ್ದ.  ಈ ವೇಳೆ ನನ್ನೊಂದಿಗಿದ್ದ ಕ್ಷಣಗಳನ್ನು ಚಿತ್ರೀಕರಿಸಿಕೊಂಡಿದ್ದಾನೆ. ಬಳಿಕ ಫೋಟೋಗಳನ್ನು ಕಳುಹಿಸಿ ಅಶ್ಲೀಲವಾಗಿ ಚಾಟಿಂಗ್ ಮಾಡುತ್ತಿದ್ದ ಆತ ದೈಹಿಕ ಸಂಪರ್ಕ ಬೆಳೆಸುವಂತೆ ಬಲವಂತ ಮಾಡುತ್ತಿದ್ದ. ಅಲ್ಲದೆ ನನ್ನ ಸಹೋದರಿಯ ಖಾಸಗಿ ಫೋಟೋ ಕಳುಹಿಸಿಕೊಡುವಂತೆ  ಪೀಡಿಸಿದ್ದಾನೆ ಎಂದು ಯುವತಿ ಆರೋಪಿಸಿ ದೂರು ನೀಡಿದ್ದಾರೆ.  ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?