ಬೆಂಗಳೂರು: ಡ್ರಗ್ಸ್ ನಶೆಯ ಮತ್ತು ಬಗೆದಷ್ಟು ಆಳವಾಗುತ್ತ ಹೋಗುತ್ತಿದ್ದು, ನಟಿ, ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಆಪ್ತ ರವಿ ಶಂಕರ್ ಬಳಿಕ ಮತ್ತೊಬ್ಬ ನಟಿ ಸಂಜನಾ ಗಲ್ರಾನಿ ಆಪ್ತ ರಾಹುಲ್ ನನ್ನು ಸಿಸಿಬಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಈ ವೇಳೆ ವಿಡಿಯೋ ಸಾಕ್ಷ್ಯ ಸೇರಿ ಹಲವು ಪ್ರಮುಖ ಮಾಹಿತಿ ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಸಿಸಿಬಿ ಪೊಲೀಸರು ನಟಿ ರಾಗಿಣಿ ಆಪ್ತ ರವಿಶಂಕರ್ ಬಳಿಕ ಸಂಜನಾ ಗಲ್ರಾನಿ ಆಪ್ತ ರಾಹುಲ್ನನ್ನು ಕಾರಿನ ಸಮೇತ ರಾತ್ರಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಮಧ್ಯಾಹ್ನದ ವೇಳೆಗೆ ಹೆಚ್ಚಿನ ಬೆಳವಣಿಗೆಯಾಗುವ ಸಾಧ್ಯತೆ ಇದೆ. ಈ ನಡುವೆ ಸೆಲೆಬ್ರಿಟಿಗಳ ಪಾರ್ಟಿಗೆ ಡ್ರಗ್ ಸಪ್ಲೈ ಮಾಡುತಿದ್ದನಾ ರಾಹುಲ್ ಎಂಬ ಪ್ರಶ್ನೆ ಇದೀಗ ಮೂಡಿದೆ. ರಾಹುಲ್ ಡ್ರಗ್ ಪೆಡ್ಲರ್ ಆಗಿರುವ ಶಂಕೆ ಹಿನ್ನೆಲೆ ಪೊಲೀಸರು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ಮಾಡುತ್ತಿದ್ದಾರೆ ಎಂದು ಸಿಸಿಬಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಇನ್ನು ರವಿ ಶಂಕರ್ನನ್ನು ವಶಕ್ಕೆ ಪಡೆಯುತ್ತಿದ್ದಂತೆ ನಟಿ ರಾಗಿಣಿ ವಕೀಲರ ಮೊರೆ ಹೋಗಿದ್ದು, ವಿಚಾರಣೆ ಎದುರಿಸುವ ಕುರಿತು ಸಲಹೆಗಳನ್ನು ಪಡೆಯುತ್ತಿದ್ದಾರೆ ಎನ್ನಲಾಗಿದೆ. ಇತ್ತ ರಾಹುಲ್ ಪೊಲೀಸರ ಬಲೆಗೆ ಬೀಳುತ್ತಿದ್ದಂತೆ ಸಂಜನಾ ಗಲ್ರಾನಿ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈವರೆಗೆ ಅವರು ಎಲ್ಲಿದ್ದಾರೆ ಎಂಬ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಕರೆಯಬಹುದು ಎಂಬ ಉದ್ದೇಶದಿಂದ ಅಜ್ಞಾತ ಸ್ಥಳದಲ್ಲಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಒಟ್ಟಾರೆ ಇನ್ನು ಎಷ್ಟು ಮಂದಿ ಸ್ಯಾಂಡಲ್ ನಟಿಯರ ಆಪ್ತರು ಪೊಲೀಸರ ಬಲಿಗೆ ಬೀಳುತ್ತಾರೋ ಗೊತ್ತಿಲ್ಲ.